ನವದೆಹಲಿ: ನೋಟ್ ರದ್ದತಿ ವೇಳೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಸೆಪ್ಟೆಂಬರ್ 13ರವರೆಗೂ ಜಾರಿ ನಿರ್ದೇಶನಾಲಯ ವಶಕ್ಕೆ ನೀಡಲು ನ್ಯಾಯಾಲಯ ಇಂದು ಆದೇಶ ಪ್ರಕಟಿಸಿದೆನಿನ್ನೆ ಬಂಧನಕ್ಕೊಳಗಾದ ಡಿಕೆ ಶಿವಕುಮಾರ್ ಅವರನ್ನು ಇಂದು ಮಧ್ಯಾಹ್ನ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರುಪಡಿಸಲಾಯಿತು. ವಾದ ವಿವಾದ ಆಲಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಸೆಪ್ಟೆಂಬರ್ 13ರವರೆಗೂ ಡಿಕೆ ಶಿವಕುಮಾರ್ ಅವರನ್ನು ಇಡಿ ವಶಕ್ಕೆ ಒಪ್ಪಿಸಿ ಆದೇಶ ಪ್ರಕಟಿಸಿದರು.
ಡಿ.ಕೆ. ಶಿವಕುಮಾರ್ ಪರವಾಗಿ ವಾದಿಸಿದ ಅಭಿಷೇಕ್ ಮನುಸಿಂಘ್ವಿ ಅವರು, ಆರೋಪಿಯಾಗಿದ್ದರೂ ಅವರ ಸ್ವತಂತ್ರ ಹರಣವಾಗಬಾರದು. ಜಾಮೀನು ತೆಗೆದುಕೊಳ್ಳುವುದು ಕೂಡ ಕಾನೂನು. ಸಂವಿಧಾನದ 22 ನೇ ವಿಧಿಯಲ್ಲಿ ಎಲ್ಲರಿಗೂ ಕಾನೂನಿನ ರಕ್ಷಣೆ ಇದೆ. ನಮಗೆ ಜಾಮೀನು ನೀಡಬೇಕು. ಎಲ್ಲೆಡೆ ಸಂಚರಿಸಲು ಸ್ವತಂತ್ರವಿರಬೇಕು. ಒಂದು ಕ್ಷಣವೂ ಇಡಿ ಕಸ್ಟಡಿಗೆ ಕೊಡಬೇಡಿ ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದರು.
ಇ.ಡಿ ಪರ ವಾದ ಮಂಡಿಸಿದ ವಕೀಲರು, ಇದು ಪಿಎಂಎಲ್ ಕಾಯ್ದೆ ಅಡಿ ಬರುವ ಪ್ರಕರಣವಾಗಿದೆ. ದೆಹಲಿಯಲ್ಲಿ ಸಿಕ್ಕ ಹಣದ ಮೂಲದ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಬೇಕಾಗಿದೆ. ಈವರೆಗೂ ಶಿವಕುಮಾರ್ ಸರಿಯಾಗಿ ವಿಚಾರಣೆಗೆ ಸಹಕರಿಸಿಲ್ಲ. ಹೀಗಾಗಿ ಅವರನ್ನು ಹೆಚ್ಚಿನ ವಿಚಾರಣೆ ನಡೆಸಬೇಕಾಗಿದ್ದು, 14 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ವಾದಿಸಿದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ