ದುಬೈ: ಯುಎಇಯಲ್ಲಿ ಭಾರತದ ರೂಪೇ ಕಾರ್ಡ್ಗೆ ಅನುಮೋದನೆ ಲಭಿಸಿದ್ದು, ಪ್ರಾಯೋಗಿಕ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಕಾರ್ಡ್ ಮೂಲಕ ಖರೀದಿಸುವವರಿಗೆ ಉತ್ತಮ ಲಾಭ ಲಭ್ಯವಾಗಲಿದೆ ಎಂದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಹೇಳಿದೆ. ಇದು ದ್ವಿಪಕ್ಷೀಯ ಸಂಬಂಧದ ಪ್ರಬಲ ಹೆಜ್ಜೆ ಎಂದು ಕೇಂದ್ರ ವಿವರಿಸಿದೆ.
ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿಯವರ ಯುಎಇ ಭೇಟಿ ಸಂದರ್ಭದಲ್ಲಿ ಯುಎಇಯಲ್ಲಿ ರೂಪೇ ಕಾರ್ಡ್ಗೆ ಅಧಿಕೃತವಾಗಿ ಅನುಮೋದನೆ ನೀಡಲಾಗಿತ್ತು.
ಆಯ್ದ ವಾಣಿಜ್ಯ ಸಂಸ್ಥೆಗಳಿಂದ ಖರೀದಿಸಿದ ಉತ್ಪನ್ನಗಳಿಗೆ ಉತ್ತಮ ರಿಯಾಯಿತಿಯನ್ನು ನೀಡುವುದಾಗಿ ರಾಷ್ಟ್ರೀಯ ಪಾವತಿ ನಿಗಮ ದುಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ. ವಿಶ್ವ ಎಕ್ಸ್ಪೋ ಮತ್ತು ದುಬೈ ವ್ಯಾಪಾರ ಮೇಳದಲ್ಲಿ ಹೆಚ್ಚಿನ ರಿಯಾಯಿತಿಗಳು ಲಭ್ಯವಾಗಲಿದೆ.
ಭಾರತದಲ್ಲಿ ಈಗಾಗಲೇ 60 ಕೋಟಿ ರೂಪೇ ಕಾರ್ಡ್ಗಳನ್ನು ಹಂಚಲಾಗಿದೆ. ಯುಎಇಗೆ ಬರುವ ಭಾರತೀಯರು ಈ ಕಾರ್ಡ್ ಅನ್ನು ವಿವಿಧ ರೀತಿಯಲ್ಲಿ ಬಳಸಬಹುದು ಎಂದು ಹೇಳಲಾಗಿದೆ.
ಒಂದೇ ಮೊಬೈಲ್ ಅಪ್ಲಿಕೇಶನ್ಗೆ ಬಹು ಬ್ಯಾಂಕ್ ಖಾತೆಗಳನ್ನು ಸಂಪರ್ಕ ಗೊಳಿಸಬಹುದಾಗಿದೆ. ಸುದ್ದಿಗೋಷ್ಠಿಯಲ್ಲಿ ಎನ್ಪಿಸಿಐ ಮುಖ್ಯ ಕಾರ್ಯಾಚರಣಾ ಅಧಿಕಾರಿ ಪ್ರವೀನಾ ರೈ ಮತ್ತು ಮುಖ್ಯ ಡಿಜಿಟಲ್ ಅಧಿಕಾರಿ ಆರಿಫ್ ಖಾನ್ ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ