ಕುವೈತ್ ನಗರ: ಕುವೈತ್ನಲ್ಲಿರುವ ವಲಸಿಗರ ವೈದ್ಯಕೀಯ ಪ್ರಮಾಣಪತ್ರಗಳನ್ನು ದೃಢೀಕರಿಸಲು ಶುಲ್ಕ ವಿಧಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯಕೀಯ ರಜೆ ಪ್ರಮಾಣಪತ್ರವನ್ನು ದೃಢೀಕರಿಸಲು ಎರಡು ದಿನಾರ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ದೇಶದ ಒಳಗೆ ಮತ್ತು ಹೊರಗಿನ ಖಾಸಗಿ ಆಸ್ಪತ್ರೆಗಳಿಂದ ಪಡೆಯುವ ಪ್ರಮಾಣಪತ್ರಗಳ ಅನುಮೋದನೆಗಾಗಿ ಈ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ವೈದ್ಯಕೀಯ ಫಿಟ್ನೆಸ್ ಪ್ರಮಾಣಪತ್ರಕ್ಕೆ 10 ದಿನಾರ್ ಮತ್ತು ಸರಕಾರಿ ಉದ್ಯೋಗಗಳಿಗಾಗಿ ನಡೆಸುವ ವೈದ್ಯಕೀಯ ಪರೀಕ್ಷೆಗಳಿಗೆ 20 ದಿನಾರ್ ಶುಲ್ಕ ವಿಧಿಸಲಾಗುತ್ತದೆ. ಅಂಗವೈಕಲ್ಯತೆಯನ್ನು ದೃಢೀಕರಿಸುವ ಪ್ರಮಾಣಪತ್ರ ಪಡೆಯಲು ಐದು ದಿನಾರ್ ಶುಲ್ಕ ಪಾವತಿಸಬೇಕಾಗಿದ್ದು, ಇದಲ್ಲದೆ, ಆರೋಗ್ಯ ಕ್ಷೇತ್ರದ ವಿವಿಧ ಸೇವೆಗಳಿಗೆ ಶುಲ್ಕ ವಿಧಿಸಲಾಗಿದೆ.
ವೈದ್ಯಕೀಯ ಅಂಗಸಂಸ್ಥೆಗಳನ್ನು ತೆರೆಯಲು 200 ದಿನಾರ್ ಶುಲ್ಕ ನಿಗಧಿಪಡಿಸಲಾಗಿದೆ. ವೈದ್ಯಕೀಯ ಉತ್ಪನ್ನಗಳ ಜಾಹೀರಾತಿನ ಅನುಮೋದನೆಗಾಗಿ ಪ್ರತಿ ಮೂರು ತಿಂಗಳಿಗೊಮ್ಮೆ 50 ದಿನಾರ್ ಶುಲ್ಕವನ್ನು ವಿಧಿಸಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು