ವಿಶ್ವಸಂಸ್ಥೆ: ಕಾಶ್ಮೀರ ವಿಚಾರವಾಗಿ ಭಾರತದ ವಿರುದ್ಧ ಕಾಲು ಕೆರೆಯುತ್ತಿರುವ ಪಾಕಿಸ್ತಾನದ ಮಾನವನ್ನು ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕಿದ್ದು, ಬಿನ್ ಲಾಡೆನ್ ಗೆ ಆಶ್ರಯ ನೀಡಿದ್ದು, 130 ನಿಷೇಧಿತ ಉಗ್ರರ ಪೋಷಿಸಿದ್ದು ಯಾರು? ಎಂದು ಪ್ರಶ್ನೆ ಮಾಡಿದೆ.
ವಿಶ್ವಸಂಸ್ಥೆಯ ಸಭೆಯಲ್ಲಿ ಚರ್ಚಾ ಸಂದರ್ಭದಲ್ಲಿ ಮಾತನಾಡಿದ ಭಾರತದ ವಿದೇಶಾಂಗ ಸಚಿವಾಲಯದ ಮೊದಲ ಕಾರ್ಯದರ್ಶಿ ವಿಧಿಶಾ ಮೈತ್ರಾ ಅವರು, ಬಿನ್ ಲಾಡೆನ್ ಗೆ ಆಶ್ರಯ ನೀಡಿದ್ದು, 130 ನಿಷೇಧಿತ ಉಗ್ರರ ಪೋಷಿಸಿದ್ದು ಯಾರು?..ಉಗ್ರರಿಗೆ ಪಿಂಚಣಿ ನೀಡುತ್ತಿದ್ದೇವೆ ಎಂದು ಪಾಕ್ ಒಪ್ಪಿಕೊಳ್ಳಲಿದೆಯೇ..? ಎಂದು ಪ್ರಶ್ನಿಸಿದ್ದಾರೆ.
ಅಣ್ವಸ್ತ್ರ ಸಹಿತ ರಾಷ್ಟ್ರಗಳ ನಡುವೆ ಯುದ್ಧ ನಡೆದ ಅದರ ಪರಿಣಾಮವನ್ನು ಇಡೀ ವಿಶ್ವವೇ ಅನುಭವಿಸಬೇಕು ಎನ್ನುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆಗೆ ತಿರುಗೇಟು ನೀಡಿದ ಅವರು, ‘ವಿಶ್ವಸಂಸ್ಥೆ ಪಟ್ಟಿ ಮಾಡಿರುವ ಉಗ್ರರಿಗೆ ಪಿಂಚಣಿ ನೀಡುತ್ತಿರುವ ವಿಚಾರವನ್ನು ಪಾಕ್ ಒಪ್ಪಿಕೊಳ್ಳಲಿದೇಯೇ ಎಂದು ಪ್ರಶ್ನಿಸಿದ್ದಾರೆ. ಅಂತೆಯೇ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಭಾಷಣದ ಕುರಿತು ಟೀಕಾ ಪ್ರಹಾರ ನಡೆಸಿದ ಅವರು, ‘ಇಮ್ರಾನ್ ಖಾನ್ ಮಾತನಾಡಿದ್ದರ ಅರ್ಥ ಹೇಗಿತ್ತು ಎಂದರೆ ತಿಕ್ಕಾಟ ನಡೆಯುತ್ತಿರುವುದು ಅಮೆರಿಕ ಮತ್ತು ಅವರ ನಡುವೆ, ಶ್ರೀಮಂತರು-ಬಡವರು, ಉತ್ತರ ಮತ್ತು ದಕ್ಷಿಣ, ಅಭಿವೃದ್ಧಿ ಹೊಂದಿದ ಮತ್ತು ಅಭಿವೃದ್ಧಿ ಹೊಂದುತ್ತಿರುವ, ಮುಸ್ಲಿಂ ಮತ್ತು ಇತರರ ನಡುವೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ರಕ್ತದೋಕುಳಿ, ದಂಗೆ ಏಳುವಿಕೆಯಂತಹ ಹೇಳಿಕೆಗಳು ಪಾಕಿಸ್ತಾನದ ಪ್ರಧಾನಿಗೆ ಶೋಭಿಸುವುದಿಲ್ಲ. 21ನೇ ಶತಮಾನದ ಹೊಸ್ತಿಲಲ್ಲಿ ಇಂತಹ ನಡೆ ಇತರೆ ರಾಷ್ಟ್ರಗಳ ಮೇಲೂ ನಕರಾತ್ಮಕ ಪರಿಣಾಮ ಬೀರುತ್ತದೆ ಎಂದು ಟೀಕಿಸಿದರು.
ಅಂತೆಯೇ ವಿಶ್ವಸಂಸ್ಥೆ ಪಟ್ಟಿ ಮಾಡಿರುವ ಅಲ್-ಖೈದಾ ಹಾಗೂ ಇತರರ ಸಂಘಟನೆಯ 130 ಉಗ್ರರಿಗೆ ಪಿಂಚಣಿ ನೀಡುತ್ತಿರುವ ಏಕೈಕ ರಾಷ್ಟ್ರ ಎಂದರೆ ಅದು ಪಾಕಿಸ್ತಾನ ಮಾತ್ರ. ಈ ಬಗ್ಗೆ ಪ್ರಶ್ನೆ ಮಾಡಿದರು ಅದು ಸತ್ಯಾಂಶವನ್ನು ಒಪ್ಪಿಕೊಳ್ಳುತ್ತದೆಯೇ ಎಂದು ಕಿಡಿಕಾರಿದರು.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ