ಮಂಗಳೂರು,ಅ.1 ; ಎಸ್ಸೆಸ್ಸೆಫ್ ಮುಖವಾಣಿ ‘ಇಶಾರ’ ಚಂದಾ ಅಭಿಯಾನವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಾಲನೆ ನೀಡಲಾಯಿತು.
ಕರ್ನಾಟಕ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಸುನ್ನಿ ಕೋ-ಆರ್ಡಿನೇಶನ್ ಸಮಿತಿ ಅಧ್ಯಕ್ಷ ಎಸ್.ಪಿ.ಹಂಝ ಸಖಾಫಿ ಬಂಟ್ವಾಳ, ಎಸ್ಸೆಸ್ಸೆಫ್ ಮಾಜಿ ರಾಜ್ಯಾಧ್ಯಕ್ಷ ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ, ಜಂಇಯ್ಯತುಲ್ ಉಲಮಾ ರಾಜ್ಯ ಕಾರ್ಯದರ್ಶಿ ಮುಹ್ಯಿದ್ದೀನ್ ಸಖಾಫಿ ತೋಕೆ, ಎಸ್.ವೈ.ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಮ್ಮೆಸ್ಸೆಂ ಝೈನಿ ಕಾಮಿಲ್, ಸಯ್ಯಿದ್ ಸಾದಾತ್ ತಂಙಳ್ ಕರ್ವೇಲು, ರಾಜ್ಯ ಇಹ್ಸಾನ್ ಕಾರ್ಯದರ್ಶಿ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಸ್ವಾದಿಕ್ ಮಾಸ್ಟರ್ ಮಲೆಬೆಟ್ಟು, ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ಅಧ್ಯಕ್ಷ ಅಬ್ದುರ್ರಹ್ಮಾನ್ ಹಾಜಿ ಮುಂತಾದ ನಾಯಕರು ವಿವಿಧೆಡೆಯಾಗಿ ಚಂದಾ ಸ್ವೀಕರಿಸಿದರು.
ಮುಂದುವರಿದ ಭಾಗವಾಗಿ ಅಕ್ಟೋಬರ್ 2 ರಂದು ದ.ಕ.ಜಿಲ್ಲಾ ಸಮಿತಿ ನಾಯಕರು, 3 ರಂದು ಝೋನ್ ನಾಯಕರು, 4 ರಂದು ಡಿವಿಶನ್ ನಾಯಕರು, 5 ರಂದು ಸೆಕ್ಟರ್ ನಾಯಕರು, 6 ರಂದು ಶಾಖಾ ನಾಯಕರು ಚಂದಾ ಪಡೆಯಲಿದ್ದಾರೆ. ಅಕ್ಟೋಬರ್ 7 ರಿಂದ 15 ರ ತನಕ ಜಿಲ್ಲಾ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಇಶಾರ ಅಭಿಯಾನ ನಡೆಯಲಿದೆ ಎಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶರೀಫ್ ನಂದಾವರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ