ಅಬುಧಾಬಿ: ಅಬುಧಾಬಿಯಲ್ಲಿನ ಸುಂಕ ಸಂಬಂಧಿತ ವಿವಾಧಗಳು ಕೊನೆಗೊಂಡಿದೆ. 2020 ರ ಜನವರಿ 1 ರವರೆಗೆ ಟೋಲ್ ವಿಧಿಸಲಾಗುವುದಿಲ್ಲ ಮತ್ತು ಪ್ರಯಾಣವು ಉಚಿತವಾಗಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಕ್ಟೋಬರ್ 15 ರಿಂದ ನಾಲ್ಕು ಟೋಲ್ ಗೇಟ್ಗಳು ಕಾರ್ಯನಿರ್ವಹಿಸಲಿವೆ ಎಂದು ಈ ಹಿಂದೆ ಘೋಷಿಸಲಾಗಿತ್ತು.
ಟೋಲ್ ಪಾವತಿಸುವ ಮೊದಲು ತಮ್ಮ ವಾಹನಗಳನ್ನು ನೋಂದಾಯಿಸಲು ಮತ್ತು ಪ್ರೀ ಪೇಡ್ ಟೋಲ್ ಖಾತೆಯನ್ನು ತೆರೆಯಲು ತಿಳಿಸಲಾಗಿತ್ತು. ಈ ಬಗ್ಗೆ ಕಳವಳಗಳ ಮಧ್ಯೆ ಸಮಾಧಾನಕರ ಪ್ರಕಟಣೆ ಬಂದಿದೆ. ನೋಂದಣಿ ಸೇರಿದಂತೆ ಸಿದ್ಧತೆಗಳಿಗೆ ಹೆಚ್ಚಿನ ಸಮಯ ಬೇಕಾಗುವ ಕಾರಣ ಗಡುವನ್ನು ವಿಸ್ತರಿಸಲಾಗಿದೆ.
ಶನಿವಾರದಿಂದ ಗುರುವಾರದವರೆಗೆ ಬೆಳಿಗ್ಗೆ 7 ರಿಂದ 9 ರವರೆಗೆ ಮತ್ತು ಸಂಜೆ 5 ರಿಂದ 7 ರವರೆಗೆ 4 ದಿರ್ಹಂ ಟೋಲ್ ಇರುತ್ತದೆ. ಇತರ ಸಮಯಗಳು ಮತ್ತು ಸಾರ್ವಜನಿಕ ರಜಾದಿನಗಳಲ್ಲಿ ಎರಡು ದಿರ್ಹಮ್ಗಳನ್ನು ವಿಧಿಸಲಾಗುತ್ತದೆ. ದಿನಕ್ಕೆ ಗರಿಷ್ಠ ಮೊತ್ತ16 ದಿರ್ಹಂ ಎಂದು ನಿಗದಿಪಡಿಸಲಾಗಿದೆ. ವಾಹನಕ್ಕೆ ತಿಂಗಳಿಗೆ ಪಾವತಿಸಬೇಕಾದ ಗರಿಷ್ಠ ಟೋಲ್ 200 ದಿರ್ಹಂ ಆಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ