ದೋಹಾ: ಖತರ್ನಲ್ಲಿ ಕೆಲಸ ಮಾಡುತ್ತಿರುವ ಕೇರಳದ ದಾದಿ ದಂಪತಿಯ ಇಬ್ಬರು ಮಕ್ಕಳು ಹಮದ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಏಳು ತಿಂಗಳು ಪ್ರಾಯದ ರಿದಾ ಮತ್ತು ಮೂರು ವರ್ಷದ ರಿದು ಮೃತ ಮಕ್ಕಳು ಎಂದು ತಿಳಿದು ಬಂದಿದೆ.
ಅವರು ಕೋಝಿಕೋಡ್ನ ಫರೂಕ್ ಮೂಲದವರಾದ ಹಾರಿಸ್ ಮತ್ತು ನಾದಾಪುರಂನ ವನಿಯೂರ್ ಶಮೀಮಾ ಅವರ ಪುತ್ರಿಯರು ಎನ್ನಲಾಗಿದೆ. ಹಾರಿಸ್ ಅಬುನಖ್ಲಾ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ದಾದಿಯಾಗಿದ್ದಾರೆ. ಶಮೀಮಾ ದೋಹಾದ ನಸೀಮ್ ಅಲ್ ರಬೀಹ್ ವೈದ್ಯಕೀಯ ಕೇಂದ್ರದಲ್ಲಿ ದಾದಿಯಾಗಿ ಕೆಲಸ ಮಾಡುತ್ತಿದ್ದಾರೆ.
ಮಕ್ಕಳ ವಿಷಾಹಾರ ಸೇವನೆಯೇ ಕಾರಣ ಎಂದು ದೃಢೀಕರಿಸದ ವರದಿಗಳಿವೆ. ಹಿರಿಯ ಮಗು ಮುಂಜಾನೆ 3ರ ಸುಮಾರಿಗೆ ಮತ್ತು ಕಿರಿಯ ಮಗು ಬೆಳಗ್ಗೆ 10 ಗಂಟೆಗೆ ನಿಧನರಾದರು ಎಂದು ಶಮೀಮಾ ಅವರ ಸಹೋದ್ಯೋಗಿ ಹಬೀಬ್ ಮಲಯಾಳ ಪತ್ರಿಕೆಯೊಂದಕ್ಕೆ ತಿಳಿಸಿದರು.
ಶಮೀಮಾ ಮತ್ತು ಹಾರಿಸ್ ಹಮದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಬ್ಬರ ಆರೋಗ್ಯವು ಸ್ಥಿರವಾಗಿದೆ. ಶಮೀಮಾ ಅವರ ಪೋಷಕರು ದೋಹಾಕ್ಕೆ ತೆರಳಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ