ಜಿದ್ದಾ: ಉಮ್ರಾ ಸೇವಾ ಕಂಪನಿಗಳು ಉಮ್ರಾ ವೀಸಾ ನಿಯಮಗಳನ್ನು ಬದಲಾಯಿಸುವಂತೆ ಬಯಸಿವೆ. ಪ್ರವಾಸಿ ವೀಸಾಗಳ ರೂಪದಲ್ಲಿ ಮಹರಂ ಇಲ್ಲದೆ ಮಹಿಳೆಯರಿಗೆ ಉಮ್ರಾ ನಿರ್ವಹಿಸಲು ಅವಕಾಶ ನೀಡುವಂತೆ ಕಂಪನಿಗಳು ಹಜ್ ಮತ್ತು ಉಮ್ರಾ ಸಚಿವರನ್ನು ಕೇಳಿಕೊಂಡಿದೆ. ಈ ಬಗ್ಗೆ ಅಧ್ಯಯನ ನಡೆಸುವುದಾಗಿ ಸಚಿವರು ಹೇಳಿದರು.
ಪ್ರಸಕ್ತ ಮಹಿಳಾ ಯಾತ್ರಾರ್ಥಿಗಳು ಮಹರಂ ಅಥವಾ ವಿವಾಹ ನಿಷಿದ್ಧ ಇರುವ ಪುರುಷ ಪಾಲಕರೊಂದಿಗೆ ಮಾತ್ರ ಪ್ರಯಾಣಿಸಲು ಅನುಮತಿ ಇದೆ. ಅಥವಾ 45 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರಿಗೆ ಸಂಘಟಿತ ಉಮ್ರಾ ಗುಂಪಿನ ಮೂಲಕ ಉಮ್ರಾ ಮಾಡಲು ಅವಕಾಶವಿದೆ. ಆದರೆ ಪ್ರವಾಸಿ ವೀಸಾಗಳಲ್ಲಿ ಬರುವ ಮಹಿಳೆಯರಿಗೆ ಮಹರಂ ಇಲ್ಲದೆ ಉಮ್ರಾ ನಿರ್ವಹಿಸಲು ಅವಕಾಶ ನೀಡುವ ನಿಯಮ ಇತ್ತೀಚೆಗೆ ಜಾರಿಗೆ ಬಂದಿದೆ.
ಈ ರೀತಿಯಲ್ಲಿ ಉಮ್ರಾ ಯಾತ್ರಿಗಳಿಗೂ ಅನುಮತಿ ನೀಡುವ ಬಗ್ಗೆ ಅಧ್ಯಯನ ಮಾಡಲಾಗುವುದು ಎಂದು ಸಚಿವಾಲಯ ವ್ಯಕ್ತಪಡಿಸಿದೆ. ಉಮ್ರಾ ಸರ್ವಿಸ್ ಕಂಪನಿ ಮಾಲೀಕರು ಮತ್ತು ಹಜ್, ಉಮ್ರಾ ಸಚಿವ ಡಾ.ಮುಹಮ್ಮದ್ ಸ್ವಾಲಿಹ್ ಬಿಂತನ್ ಅವರ ನಡುವಿನ ಸಭೆಯಲ್ಲಿ ಈ ಒಪ್ಪಂದಕ್ಕೆ ಬರಲಾಗಿದೆ.
ಮಹರಮ್ ವ್ಯವಸ್ಥೆಯನ್ನು ರದ್ದುಪಡಿಸುವುದು ಸೇರಿದಂತೆ 11 ವಿಷಯಗಳ ಕುರಿತು ಹಜ್ ಮತ್ತು ಉಮ್ರಾ ಸಚಿವರು ಸಭೆ ನಡೆಸಿದ್ದಾರೆ ಎಂದು ಮಕ್ಕಾ ಚೇಂಬರ್ ಆಫ್ ಕಾಮರ್ಸ್‌ನ ಹಜ್ ಮತ್ತು ಉಮ್ರಾ ಸಮಿತಿಯ ಅಧ್ಯಕ್ಷ ಮರ್ವಾನ್ ಶಅಬಾನ್ ಹೇಳಿದ್ದಾರೆ. ಅದೇ ಸಮಯದಲ್ಲಿ, ಉಮ್ರಾ ಸೇವಾ ಕಂಪನಿಗಳು ಸೇವೆಯ ಗುಣಮಟ್ಟವನ್ನು ಸುಧಾರಿಸಬೇಕೆಂದು ಸಚಿವರು ಒತ್ತಾಯಿಸಿದರು.















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ