ಶಾರ್ಜಾ: ಕೆ.ಸಿ.ಎಫ್ ಶಾರ್ಜಾ ಝೋನ್ ವತಿಯಿಂದ ದಿನಾಂಕ 1-11-19 ರಂದು ಶುಕ್ರವಾರ ಸಂಜೆ 5.30 ಗಂಟೆಗೆ ಶಾರ್ಜಾದ ಅಲ್ ಖಾಸಿಮಿಯಾದಲ್ಲಿರುವ ರಯಾನ್ ಹೋಟೆಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವು ಬಹಳ ವಿಜಂಭ್ರಣೆಯಿಂದ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಲಯ ಅಧ್ಯಕ್ಷ ಬಹು! ಅಬೂಸ್ವಾಲಿಹ್ ಸಖಾಫಿಯವರು ವಹಿಸಿ ಝೋನ್ ಪ್ರಧಾನ ಕಾರ್ಯದರ್ಶಿ ಬಹು! ರಜಬ್ ಮುಹಮ್ಮದ್ ಉಚ್ಚಿಲರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಕೋರಿದರು. ಆಡಳಿತ ವಿಭಾಗದ ಕಾರ್ಯದರ್ಶಿ ಬಹು! ತಾಜುದ್ದೀನ್ ಅಮ್ಮುಂಜೆರವರು ಸಭೆಗೆ ಮತ್ತು ಅತಿಥಿಗಳಿಗೆ ಸ್ವಾಗತ ಕೋರಿದರು.
ಮುಖ್ಯ ಅತಿಥಿ ಆಗಿ ಮುಹಮ್ಮದ್ ಅಫ್ಝಲ್ ಉದ್ಯಾವರ ಅವರು ಆಗಮಿಸಿದ್ದರು. ಕೆ.ಸಿ.ಎಫ್ ಶಾರ್ಜ ವಲಯದ ಆಡಳಿತ ವಿಭಾಗದ ಅಧ್ಯಕ್ಷರಾದ ಅಬ್ದುಲ್ಲಾ ಕುಂಞ್ಞ ಪೆರುವಾಯಿಯವರು ಮುಖ್ಯ ಪ್ರಭಾಷಣಗೈಯುತ್ತಾ ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ ಎಂದು ವಿವರಿಸಿದರು. ಸಭೆಯಲ್ಲಿ ಶಾರ್ಜಾ ವಲಯದ ಗಣ್ಯವ್ಯಕ್ತಿಗಳು ಹಾಜರಿದ್ದರು. ಕೊನೆಯಲ್ಲಿ ಧನ್ಯವಾದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ