ಮೈಸೂರು,ನ.18: ಮಾಜಿ ಸಚಿವ,ಹಾಲಿ ಶಾಸಕ ತನ್ವೀರ್ ಸೇಠ್ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆದಿದೆ.ನಿನ್ನೆ ರಾತ್ರಿ ನಗರದ ಬನ್ನಿಮಂಟಪ ಆವರಣದಲ್ಲಿ ಸಂಬಂಧಿಗಳ ಬೀಗರ ಔತಣಕೂಟದಲ್ಲಿ ಸೇಠ್ ಭಾಗಿಯಾಗಿದ್ದ ವೇಳೆ ಅಪರಚಿತ ವ್ಯಕ್ತಿ ಏಕಾಏಕಿ ಅವರ ಮೇಲೆ ಡ್ಯಾಗರ್ನಿಂದ ಹಲ್ಲೆ ನಡೆಸಿದ್ದು, ಕತ್ತಿನ ಮೇಲ್ಭಾಗಕ್ಕೆ ಇರಿಯಲಾಗಿದೆ.
ಸದ್ಯ ತನ್ವೀರ್ ಸೇಠ್ ರನ್ನು ಕೊಲಂಬಿಯಾ ಆಸ್ಪತ್ರೆಯಲ್ಲಿ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನ ಸ್ಥಳೀಯರು ಹಿಡಿದು ಎನ್.ಆರ್. ಠಾಣೆ ಪೊಲೀಸರಿಗೆ ಒಪ್ಪಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸ್ ವಿಚಾರಣೆ ವೇಳೆ ಆರೋಪಿ, ಮೈಸೂರಿನ ಗೌಸಿಯಾನಗರದ ನಿವಾಸಿ ಫರ್ಹಾನ್ ಅಂತ ತಿಳಿದು ಬಂದಿದೆ. ನರಸಿಂಹರಾಜ ಕ್ಷೇತ್ರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ