ಬೆಂಗಳೂರು : ರಾಜ್ಯದ ಬಿಜೆಪಿ ನಾಯಕರೆಲ್ಲರೂ ನನ್ನ ಮೇಲೆಯೇ ಮುಗಿಬೀಳುತ್ತಿರುವುದು ನೋಡಿದರೆ,
ನನ್ನನ್ನು ಅತಿಹೆಚ್ಚು ಟೀಕಿಸಿದವರಿಗೆ ಏನೋ ಬಹುಮಾನ ಕೊಡ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಭರವಸೆ ನೀಡಿದ ಹಾಗಿದೆ. ನಾನು ಏಕಾಂಗಿಯಾಗಿದ್ದರೆ ಇವರಿಗ್ಯಾಕೆ ನನ್ನ ಬಗ್ಗೆ ಭಯ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಕಿದ್ದಾರೆ.
ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ ಎಂಬ ಬಿಜೆಪಿ ನಾಯಕರಿಗೆ ಟ್ವೀಟ್ ಮೂಲಕ ಈ ರೀತಿ ಸಿದ್ದರಾಮಯ್ಯ ತಿವಿದಿದ್ದಾರೆ. ಬಿಜೆಪಿ ನಾಯಕರಾದ ಡಿ.ವಿ.ಸದಾನಂಗ ಗೌಡ, ವಿ.ಸೋಮಣ್ಣ ಸೇರಿದಂತೆ ಇತರ ನಾಯಕರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನೇ ಗುರಿಯಾಗಿಸಿ ವಾಗ್ದಾಳಿ ನಡೆಸಿ, ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ ಎಂದು ಟೀಕಿಸಿದ್ದರು.
ನನ್ನ ಮಾನಸಿಕ ಸ್ಥಿತಿ ಬಗ್ಗೆ ಬಡಬಡಿಸುತ್ತಿರುವ ಡಿ.ವಿ.ಸದಾನಂದ ಗೌಡ ಬಗ್ಗೆ ಅನುಕಂಪ ಇದೆ. ಮೊದಲು ಮುಖ್ಯಮಂತ್ರಿ ಸ್ಥಾನದಿಂದ ನಂತರ ರೈಲ್ವೆ, ಕಾನೂನು, ಅಂಕಿ ಅಂಶ ಹೀಗೆ ಎಲ್ಲ ಕಡೆಗಳಲ್ಲಿಯೂ ತಿರಸ್ಕೃತಗೊಂಡ ಗೌಡರು ಈಗ ಪಕ್ಷದಲ್ಲಿ ‘ಗೊಬ್ಬರ’ವಾಗಿ ಹೋಗಿದ್ದಾರೆ. ಈ ಹತಾಶೆ ಅವರಿಂದ ಇಂತಹ ಹೇಳಿಕೆಗಳನ್ನು ಹೊರಡಿಸುತ್ತಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಖಾರವಾಗಿ ಸದಾನಂದ ಗೌಡ ವಿರುದ್ಧ ಟೀಕಿಸಿದ್ದಾರೆ. ಏಕಾಂಗಿಯಾಗಿ ಹೋಗಿರುವ ಸದಾನಂದ ಗೌಡ ಅವರನ್ನು ರಾಜ್ಯ ಬಿಜೆಪಿಯಲ್ಲಿ ಯಾರೂ ಗಂಭೀರವಾಗಿ ಸ್ವೀಕರಿಸುತ್ತಿಲ್ಲ. ಇದಕ್ಕಾಗಿ ಅವರು ತಮ್ಮ ಜೋಕುಗಳಿಗೆ ತಾವೇ ನಕ್ಕು ರಾಜ್ಯದ ಜನರಿಗೆ ಮನರಂಜನೆ ನೀಡುತ್ತಾ ಇರುತ್ತಾರೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ