ಗೋಮ,ನ. 25: ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ದೇಶದ ಗೋಮ ನಗರದಲ್ಲಿ ವಿಮಾನವೊಂದು ಅಪಘಾತಕ್ಕೀಡಾಗಿದ್ದು, 29ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಟೇಕಾಫ್ ಆದ ಕೂಡಲೆ ವಿಮಾನವು ಪತನಗೊಂಡಿದೆ.
ವಿಮಾನದಲ್ಲಿದ್ದವರಲ್ಲಿ ಬಹುತೇಕ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ ಎಂದು ನಾರ್ತ್ ಕಿವು ಸರ್ಕಾರ ತಿಳಿಸಿದೆ. ಬ್ಯುಸಿ ಬೀ ಎಂಬ ಸ್ಥಳೀಯ ಸಂಸ್ಥೆಗೆ ಸೇರಿದ ಈ ವಿಮಾನ ಬೆನಿ ನಗರಕ್ಕೆ ಹೊರಟಿತ್ತು. ಟೇಕಾಫ್ ಆಗುವ ವೇಳೆ ಅಪಘಾತಕ್ಕೀಡಾಗಿದೆ ಎಂದು ಸ್ಥಳೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಕಾರಣ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಈ ವಿಮಾನ ಸಂಸ್ಥೆಯ ಕಳಪೆ ನಿರ್ವಹಣೆಯಿಂದಾಗಿ ಆಗಿಂದಾಗ್ಗೆ ವಿಮಾನ ಅಪಘಾತಗಳು ಸಂಭವಿಸುತ್ತಿವೆ. ಹಾಗಾಗಿ ಯುರೋಪಿಯನ್ ಒಕ್ಕೂಟದಲ್ಲಿ ಈ ವಿಮಾನಗಳ ಕಾರ್ಯ ನಿರ್ವಹಣೆಯನ್ನು ನಿಷೇಧಿಸಲಾಗಿದೆ.
ಒಟ್ಟಾರೆ 29 ಮೃತದೇಹಗಳು ಪತ್ತೆಯಾಗಿವೆ. ಏರ್ಪೋರ್ಟ್ ಬಳಿ ಇದ್ದ 2 ಮನೆಗಳ ಮೇಲೆ ವಿಮಾನ ಬಿದ್ದಿದ್ದರಿಂದ ಅವೆರಡೂ ಮನೆಗಳು ನೆಲಸಮವಾಗಿವೆ ಎಂದು ಅಲ್ಲಿನ ಸರ್ಕಾರದ ಪ್ರಕಟಣೆ ತಿಳಿಸಿದೆ. ತಾಂತ್ರಿಕ ಸಮಸ್ಯೆಯಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ