ಲಖನೌ: ಅಯೋಧ್ಯೆ ಭೂ ವಿವಾದ ಕುರಿತಂತೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸದೇ ಇರಲು ಸುನ್ನಿ ಕೇಂದ್ರೀಯ ವಕ್ಫ್ ಬೋರ್ಡ್ ನಿರ್ಧರಿಸಿದೆ.
ತೀರ್ಪಿನ ಸಂಬಂಧ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕೋ ಅಥವಾ ಬೇಡವೋ ಎಂಬುದರ ಬಗ್ಗೆ ಚರ್ಚಿಸಲು ಮಂಗಳವಾರ ಸುನ್ನಿ ವಕ್ಫ್‌ಬೋರ್ಡ್‌ನ ಸಭೆ ಉತ್ತರಪ್ರದೇಶದ ಲಖನೌದಲ್ಲಿ ನಡೆಯಿತು. ಈ ಸಭೆಯಲ್ಲಿ ಮಂಡಳಿಯ 8 ಮಂದಿಯ ಪೈಕಿ 7 ಮಂದಿ ಹಾಜರಾಗಿದ್ದರು.
ಸಭೆಯ ನಂತರ ಮಾತನಾಡಿದ ವಕ್ಫ್ ಬೋರ್ಡ್‌ನ ರಜಾಕ್ ಖಾನ್, ‘ಅಯೋಧ್ಯೆ ತೀರ್ಪಿಗೆ ಸಂಬಂಧಿಸಿದಂತೆ ಮರುಪರಿಶೀಲನಾ ಅರ್ಜಿ ಸಲ್ಲಿಸಬಾರದು ಎಂಬುದು ಇಂದಿನ ಸಭೆಯ ಬಹುತೇಕರ ತೀರ್ಮಾನವಾಗಿದೆ,’ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಭಾಗವಹಿಸಿದ್ದವರ ಪೈಕಿ ಆರು ಮಂದಿ ಮರುಪರಿಶೀಲನಾ ಅರ್ಜಿ ಸಲ್ಲಿಸುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.
ಇದೇ ವೇಳೆ, ವಕ್ಫ್ ಬೋರ್ಡ್‌ಗೆ ನೀಡಲಾಗುವ ಐದು ಎಕರೆ ಜಮೀನನ್ನು ಪಡೆಯಬೇಕೋ ಬೇಡವೋ ಎಂಬುದನ್ನು ಇನ್ನಷ್ಟೇ ನಿರ್ಧರಿಸಬೇಕಿದೆ ಎಂದೂ ರಜಾಕ್ ಖಾನ್ ತಿಳಿಸಿದ್ದಾರೆ.
ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ನ.9ರಂದು ಮಹತ್ವದ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ವಿವಾದಿತ 2.77 ಎಕರೆ ಭೂಮಿಯನ್ನು ರಾಮ ಲಲ್ಲಾಗೆ ವಹಿಸಿತ್ತು. ಸುನ್ನಿ ವಕ್ಫ್ ಬೋರ್ಡ್‌ಗೆ ಅಯೋಧ್ಯೆಯಲ್ಲೇ ಪ್ರತ್ಯೇಕ ಐದು ಎಕರೆ ಭೂಮಿಯನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ತಿಳಿಸಿತ್ತು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ