ರಿಯಾದ್: ಸೌದಿ ಅರೇಬಿಯಾ ಮದ್ಯ ನಿಷೇಧವನ್ನು ಮುಂದುವರಿಸಲಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸಲು ಮದ್ಯದ ಅಗತ್ಯವಿಲ್ಲ ಎಂದು ಸೌದಿ ಪ್ರವಾಸೋದ್ಯಮ ಮತ್ತು ರಾಷ್ಟ್ರೀಯ ಪರಂಪರೆಯ ಆಯೋಗದ ಅಧ್ಯಕ್ಷ ಅಹ್ಮದ್ ಅಲ್-ಖತೀಬ್ ಹೇಳಿದ್ದಾರೆ. ಪ್ರಸ್ತುತ ಎಲೆಕ್ಟ್ರಾನಿಕ್ ಪ್ರವಾಸಿ ವೀಸಾ ದೇಶೀಯ ಪ್ರವಾಸೋದ್ಯಮದಲ್ಲಿ ಹುರುಪನ್ನು ಸೃಷ್ಟಿಸಿದೆ. ಯುಕೆ ಮತ್ತು ಚೀನಾದಿಂದ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿದ್ದಾರೆ.
ಈವರೆಗೆ 1.5 ಲಕ್ಷ ಪ್ರವಾಸಿ ವೀಸಾ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಇದು ನಿರೀಕ್ಷೆಗಿಂತಲೂ ಹೆಚ್ಚಿನದ್ದಾಗಿದೆ ಎಂದು ಅಹ್ಮದ್ ಅಲ್-ಖತೀಬ್ ಹೇಳಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ, ದೇಶವು ವಿದೇಶಿ ಪ್ರವಾಸಿಗರಿಗೆ ಅನುಕೂಲವಾಗುವಂತೆ ಸಾಕಷ್ಟು ಮೂಲಸೌಕರ್ಯ ಮತ್ತು ಹೋಟೆಲ್ಗಳನ್ನು ಹೊಂದಿದೆ.
ಸೌದಿಯ ಸಾಂಸ್ಕೃತಿಕ ಪರಂಪರೆಯನ್ನು ಕಾಪಾಡುವ ರೀತಿಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲಾಗುವುದು. ಮಸೀದಿಯ ಪ್ರಾರ್ಥನೆಯ ಸಮಯದಲ್ಲಿ ಅಂಗಡಿಗಳು ಮತ್ತು ಶಾಪಿಂಗ್ ಮಾಲ್ಗಳನ್ನು ಮುಚ್ಚಲಾಗುವುದು. ಆ ಸಂಸ್ಥೆಗಳ ನೌಕರರ ಪ್ರಾರ್ಥನೆ ಮಾಡುವ ಅವಕಾಶವನ್ನು ನಿರಾಕರಿಸಲಾಗುವುದಿಲ್ಲ. ಇದು ವ್ಯಾಪಾರಕ್ಕೆ ಅಡ್ಡಿಯಾಗುವುದಿಲ್ಲ ಎಂದು ಅಹ್ಮದ್ ಅಲ್-ಖತೀಬ್ ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು