ದುಬೈ: ಯುಎಇ ರಾಷ್ಟ್ರೀಯ ದಿನದ ಪ್ರಯುಕ್ತ ಹೆಚ್ಚಿನ ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ದುಬೈನಲ್ಲಿ ಮಾತ್ರ 674 ಕೈದಿಗಳನ್ನು ಬಿಡುಗಡೆ ಮಾಡಲು ಆಡಳಿತಗಾರ ಆದೇಶ ನೀಡಿದ್ದು, ಇತರ ಎಮಿರೇಟ್ಸ್‌ಗಳು ಶೀಘ್ರದಲ್ಲೇ ನೂರಾರು ಕೈದಿಗಳ ಬಿಡುಗಡೆ ಬಗ್ಗೆ ಪ್ರಕಟಿಸಲಿದೆ.
ಯುಎಇ ಉಪಾಧ್ಯಕ್ಷ, ಪ್ರಧಾನಿ ಮತ್ತು ದುಬೈ ಆಡಳಿತಗಾರ ಶೈಖ್ ಮುಹಮ್ಮದ್ ಬಿನ್ ರಾಶಿದ್ ಅಲ್-ಮಕ್ತೂಮ್ ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿದ್ದು, ಬಿಡುಗಡೆಗೊಳ್ಳುವವರು ದುಬೈನ ಅಪರಾಧ ಪರಿಹಾರ ಕೇಂದ್ರದ ಕೈದಿಗಳಾಗಿದ್ದಾರೆ.
ಶೈಖ್ ಮುಹಮ್ಮದ್ ಅವರ ನಿರ್ಧಾರವು ಖೈದಿಗಳು ಕುಟುಂಬಗಳೊಂದಿಗೆ ಹೊಸ ಜೀವನವನ್ನು ಪ್ರಾರಂಭಿಸಲು ಸಹಾಯ ಮಾಡಲಿದೆ ಎಂದು ದುಬೈ ಅಟಾರ್ನಿ ಜನರಲ್ ಇಸಾಮ್ ಅಲ್ ಹುಮೈದಾನ್ ಹೇಳಿದ್ದಾರೆ. ದುಬೈ ಪೊಲೀಸರೊಂದಿಗೆ ಸಮಾಲೋಚಿಸಿ ಬಿಡುಗಡೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯುಎಇ ಅಧ್ಯಕ್ಷ ಶೈಖ್ ಖಲೀಫಾ ನಿನ್ನೆ 662 ಜನರನ್ನು ಬಿಡುಗಡೆ ಮಾಡಲು ಆದೇಶಿಸಿದ್ದಾರೆ. ಅವರ ಹಣಕಾಸಿನ ಹೊಣೆಗಾರಿಕೆಗಳನ್ನು ದೇಶವು ವಹಿಸಿಕೊಳ್ಳಲಿದೆ. ಅಜ್ಮಾನ್ ದೊರೆ ಶೈಖ್ ಹುಮೈದ್ ಬಿನ್ ರಾಶಿದ್ ಅಲ್-ನುಐಮಿ ಮತ್ತು ಉಮ್ ಅಲ್-ಕೂವೈನ್ ಆಡಳಿತಾಧಿಕಾರಿ ಸಊದ್ ಬಿನ್ ರಾಶಿದ್ ಅಲ್ ಮುಅಲ್ಲ ಹಲವಾರು ಕೈದಿಗಳನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಜೈಲಿನಲ್ಲಿರುವ ಜೀವನದಲ್ಲಿ ಪಶ್ಚಾತ್ತಾಪ ಮತ್ತು ಉತ್ತಮ ನಡವಳಿಕೆಯ ಆಧಾರದ ಮೇಲೆ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ