ರಿಯಾದ್: ವೆಸ್ಟ್ ಬ್ಯಾಂಕ್ನ ಇಸ್ರೇಲ್ ಅತಿಕ್ರಮಣ ಬಗ್ಗೆ ಯುಎಸ್ನ ಹೇಳಿಕೆಯನ್ನು ಸೌದಿ ಕ್ಯಾಬಿನೆಟ್ ತಿರಸ್ಕರಿಸಿದೆ. ರಾಜ ಸಲ್ಮಾನ್ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯು ಯುಎಸ್ ಹೇಳಿಕೆಯನ್ನು ತಿರಸ್ಕರಿಸಿತು. ಪರಮಾಣು ಯೋಜನೆಗೆ ಸಂಬಂಧಿಸಿ ಇರಾನ್ನ ನಿರಂತರ ಉಲ್ಲಂಘನೆಯನ್ನು ಕೂಡ ಸಚಿವಾಲಯ ಖಂಡಿಸಿದೆ.
ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣವನ್ನು ಕಾನೂನುಬಾಹಿರ ಎಂದು ಹೇಳಲಾಗದು ಎಂಬ ಯುಎಸ್ ಹೇಳಿಕೆಯನ್ನು ಸೌದಿ ಕ್ಯಾಬಿನೆಟ್ ಸಂಪೂರ್ಣವಾಗಿ ತಿರಸ್ಕರಿಸಿದೆ. ರಿಯಾದ್ನ ಯಮಾಮಾ ಅರಮನೆಯಲ್ಲಿ ಸೌದಿ ದೊರೆ ಸಲ್ಮಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಇಸ್ರೇಲ್ ಬಗ್ಗೆ ಅಮೆರಿಕ ನೀಡಿರುವ ಹೇಳಿಕೆಯನ್ನು ಸಂಪೂರ್ಣ ತಿರಸ್ಕರಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.
ಪಶ್ಚಿಮ ದಂಡೆಯಲ್ಲಿರುವ ಇಸ್ರೇಲಿ ವಸಾಹತುಗಳು ಅಂತರ್ರಾಷ್ಟ್ರೀಯ ಕಾನೂನಿಗೆ ವಿರುದ್ಧವಾಗಿವೆ. ಅರಬ್ ಶಾಂತಿ ಪ್ರಯತ್ನಗಳು ಮತ್ತು ಅಂತರ್ರಾಷ್ಟ್ರೀಯ ಕಾನೂನಿಗೆ ಅನುಸಾರವಾಗಿ ಫೆಲೆಸ್ತೀನಿಯನ್ ಜನರಿಗೆ ಸಂಪೂರ್ಣ ಕಾನೂನು ಹಕ್ಕನ್ನು ನೀಡಬೇಕು. ಶಾಶ್ವತ ಶಾಂತಿಗಾಗಿ ಇದು ಅವಶ್ಯಕ ಎಂದರು.
ಯುಎಸ್ ನೀತಿ ಬದಲಾವಣೆಯ ಬಗ್ಗೆ ವಿಶ್ವಸಂಸ್ಥೆ ವಿಷಾದ ವ್ಯಕ್ತಪಡಿಸಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಯುಎನ್ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ