ಜಿದ್ದಾ: ಭಾರತ ಮತ್ತು ಸೌದಿ ನಡುವೆ 2020 ಹಜ್ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಸೌದಿ ಹಜ್ ವ್ಯವಹಾರಗಳ ಸಚಿವ ಮುಹಮ್ಮದ್ ಸಾಲಿಹ್ ಬಂದರ್ ಈ ಒಪ್ಪಂದಕ್ಕೆ ಸಹಿ ಹಾಕಿದರು.
ಕಳೆದ ವರ್ಷದಂತೆಯೇ 2 ಲಕ್ಷದ ಹಜ್ ಕೋಟಾ ಈ ವರ್ಷ ಕೂಡ ಮುಂದುವರಿಯಲಿದೆ. ಭಾರತೀಯ ಹಜ್ಜಾಜ್‌ಗಳ ಸೇವೆ ಮತ್ತು ಕಾರ್ಯ ವಿಧಾನಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣ ಗೊಳಿಸಲಾಗುವುದು ಎಂದು ಸಚಿವರು ಈ ವೇಳೆ ಸ್ಪಷ್ಟಪಡಿಸಿದರು.
ಹಜ್ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.
2020 ರ ವೇಳೆಗೆ ಹಜ್ ಯಾತ್ರೆ ಕೈಗೊಳ್ಳುವ ಭಾರತೀಯ ಮುಸ್ಲಿಮರಿಗೆ ಆನ್ ಲೈನ್ ಅರ್ಜಿ, ಇ-ವಿಸಾ, ಹಜ್ ಮೊಬೈಲ್ ಆಪ್, ಇ-ಮಸಿಹಾ ಆರೋಗ್ಯ ಸೇವೆ, ಇ-ಲಗೇಜ್ ಪ್ರೀ ಟ್ಯಾಗಿಂಗ್ ಹಾಗೂ ಮೆಕ್ಕಾ ಮದೀನಾದಲ್ಲಿನ ಸಾರಿಗೆ, ವಸತಿ ವ್ಯವಸ್ಥೆಗಳ ಬಗ್ಗೆ ಭಾರತದಲ್ಲೇ ಮಾಹಿತಿ ಲಭ್ಯವಾಗಲಿದೆ ಎಂದು ನಖ್ವಿ ಹೇಳಿದ್ದಾರೆ.
ಕಣ್ಣೂರಿನಲ್ಲಿ ಹೊಸ ಹಜ್ ಎಂಬಾರ್ಕೇಶನ್ ಪಾಯಿಂಟ್ ಬಗ್ಗೆ ಪ್ರಸ್ತುತ ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. ಸಚಿವರು ಜಿದ್ದಾದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು.















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ