ಮಕ್ಕಾ: ಮಕ್ಕಾದಲ್ಲಿನ ಹರಂ ಮಸೀದಿಯ ಅಭಿವೃದ್ಧಿ ಕಾರ್ಯಗಳು ಮೂರು ವರ್ಷಗಳಲ್ಲಿ ಪೂರ್ಣಗೊಳ್ಳಲಿವೆ ಎಂದು ‘ಹರಮೈನ್’ ಕಚೇರಿಯ ಮುಖ್ಯಸ್ಥರು ತಿಳಿಸಿದ್ದಾರೆ. ಮೂರನೇ ಹಂತದ ಅಭಿವೃದ್ಧಿಯ ಶೇಕಡಾ 80ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ಅವರು ಹೇಳಿದರು.
ಹಿಜ್‌ರ ವರ್ಷದ 1444 ರಲ್ಲಿ, ವಿಶ್ವದ ಅತೀ ದೊಡ್ಡ ತೀರ್ಥಯಾತ್ರೆಯ ಕೇಂದ್ರವಾದ ಮಕ್ಕಾದ ಹರಂ ಮಸೀದಿಯಲ್ಲಿ ನಡೆಯುತ್ತಿರುವ ಎಲ್ಲಾ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಳ್ಳಲಿವೆ. ಹರಮ್ ಇತಿಹಾಸದಲ್ಲಿ ಅತಿದೊಡ್ಡ ಅಭಿವೃದ್ಧಿ ಯೋಜನೆಯಾದ ಮೂರನೇ ಹರಮ್ ಅಭಿವೃದ್ಧಿ ಯೋಜನೆ ಪೂರ್ಣಗೊಂಡಿದೆ.
ಉಳಿದಿರುವುದು ಅಂತಿಮ ಸ್ಪರ್ಶ ಮಾತ್ರ ಎಂದು ಹರಮ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಅಮ್ಮಾರ್ ಅಲ್ ಅಹ್ಮದಿ ಹೇಳಿದರು. ವಿಸ್ತರಣೆ ಪೂರ್ಣಗೊಳ್ಳುವುದರೊಂದಿಗೆ, 19 ಲಕ್ಷಕ್ಕೂ ಹೆಚ್ಚು ಭಕ್ತರು ಒಂದೇ ಸಮಯದಲ್ಲಿ ಹರಮ್‌ನಲ್ಲಿ ನಮಾಝ್ ನಿರ್ವಹಿಸಲು ಸಾಧ್ಯವಾಗಲಿದೆ.
ಅಭಿವೃದ್ಧಿ ಕಾರ್ಯಗಳಲ್ಲಿ ಕಿಂಗ್ ಅಬ್ದುಲ್ ಅಝೀಝ್ ಗೇಟ್, ಬಾಬ್ ಅಜ್ಯಾದ್, ಮೇಲಿನ ಮಹಡಿ ಮತ್ತು ಎಲೆಕ್ಟ್ರೋ ಮೆಕ್ಯಾನಿಕಲ್ ವರ್ಕ್ಸ್ ಸೇರಿವೆ. ಶೌಚಾಲಯಗಳು, ಫಯರ್ಫೆಸ್ಗಳು, ಎಸ್ಕಲೇಟರ್‌ಗಳು, ಎಲಿವೇಟರ್‌ಗಳು, ಧ್ವನಿ-ಕಣ್ಗಾವಲು ಕ್ಯಾಮೆರಾಗಳು ಮತ್ತು ತಂಪಾಗಿಸುವ ವ್ಯವಸ್ಥೆಗಳಂತಹ ಮೂಲ ಸೌಕರ್ಯಗಳ ಅಭಿವೃದ್ಧಿಯನ್ನು ಈ ಯೋಜನೆಯು ಒಳಗೊಂಡಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ