ನವದೆಹಲಿ, ಡಿ 8:- ಭಾನುವಾರ ಬೆಳ್ಳಂಬೆಳಗ್ಗೆ ದೆಹಲಿಯ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಾಜ್ ಮಂಡಿ ಪ್ರದೇಶದ ಮೂರು ಮಹಡಿ ಕಟ್ಟಡದ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು, 43 ಮಂದಿ ಮೃತಪಟ್ಟಿದ್ದಾರೆ.
ಘಟನೆ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ದೆಹಲಿಯ ಅನಾಜ್ ಮಂಡಿ ಪ್ರದೇಶದಲ್ಲಿ ನಡೆದಿರುವ ಅಗ್ನಿ ದುರಂತ ಭಯಾನಕವಾಗಿದೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಘಟನಾ ಸ್ಥಳದಲ್ಲಿ ಅಧಿಕಾರಿಗಳು ಅಗತ್ಯವಿರುವ ಎಲ್ಲ ಸಹಾಯ ಮಾಡುತ್ತಿದ್ದಾರೆ’ ಎಂದು ಹೇಳಿದ್ದಾರೆ.
ಅನಾಜ್ ಮಂಡಿಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಹತ್ತಿರದ ರಕ್ತ ಸಂಬಂಧಿಗಳಿಗೆ ಪ್ರಧಾನಿ ನರೇಂದ್ರಮೋದಿ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ಪ್ರಕಟಿಸಿದ್ದಾರೆ.ದುರಂತದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ತಲಾ 50,000 ರೂ.ಪರಿಹಾರಕ್ಕೂ ಪ್ರಧಾನಿ ಅನುಮೋದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ