ರಿಯಾದ್: ಸೌದಿ ಅರೇಬಿಯಾದಲ್ಲಿರುವ ವಲಸಿಗರ ಪೈಕಿ ಇದುವರೆಗೆ ತಮ್ಮ ಬಯೋಮೆಟ್ರಿಕ್ ನೋಂದಣಿಯನ್ನು ಮಾಡದವರು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಪಾಸ್ಪೋರ್ಟ್ ಡೈರೆಕ್ಟರೇಟ್ ಜನರಲ್ (ಜವಾಝಾತ್) ತಿಳಿಸಿದೆ.
ಸೌದಿ ಅರೇಬಿಯಾದ ಅಧಿಕೃತ ಸುದ್ದಿ ಸಂಸ್ಥೆಯು ಈ ಸುದ್ದಿ ಪ್ರಕಟಿಸಿದ್ದು, ಜವಾಸತ್ ಕಚೇರಿಗಳಿಗೆ ಭೇಟಿ ನೀಡುವ ಮೂಲಕ ಬೆರಳಚ್ಚುಗಳನ್ನು ಎಲೆಕ್ಟ್ರಾನಿಕ್ ವ್ಯವಸ್ಥೆಯಲ್ಲಿ ನೋಂದಾಯಿಸಬಹುದು.
ಸೌದಿ ಅರೇಬಿಯಾದಲ್ಲಿ ವಾಸವಿರುವ ವಲಸಿಗರು ಮತ್ತು ಅವರ ಅವಲಂಬಿತರು ತಮ್ಮ ಬಯೋಮೆಟ್ರಿಕ್ ನೋಂದಣಿಯನ್ನು ಪೂರ್ಣಗೊಳಿಸಬೇಕು. ಪೂರ್ಣಗೊಳಿಸದವರಿಗೆ ಜವಾಝಾತ್ನ ವಿವಿಧ ಸೇವೆಗಳು ಲಭಿಸುವುದಿಲ್ಲ.
ಬೆರಳಚ್ಚುಗಳನ್ನು ನೋಂದಾಯಿಸದವರು ಜವಾಝಾತ್ನ ಕಂಪ್ಯೂಟರ್ ಸಿಸ್ಟಮ್ ಮೂಲಕ ಯಾವುದೇ ವಹಿವಾಟು ನಡೆಸಲು ಸಾಧ್ಯವಾಗುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಎಲ್ಲಾ ಗವರ್ನರೇಟ್ಗಳಲ್ಲಿ ನಿರ್ದಿಷ್ಟ ಸ್ಥಳಗಳಲ್ಲಿ ಬೆರಳಚ್ಚುಗಳನ್ನು ನೋಂದಾಯಿಸಲು ವ್ಯವಸ್ಥೆ ಮಾಡಲಾಗಿವೆ. ವಿವರಗಳು www.gdp.gov.sa ನಲ್ಲಿ ಲಭ್ಯವಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು