ಮಂಗಳೂರು: ಪೌರತ್ವ ಕಾಯ್ದೆ ತಿದ್ದುಪಡಿ 2019 ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸ್ ಫೈರಿಂಗ್‌ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯ ವರದಿ ಮಾಡಲು ಮಂಗಳೂರಿಗೆ ಆಗಮಿಸಿದ್ದ ಕೇರಳದ ಪತ್ರಕರ್ತರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳದ ಪ್ರಮುಖ ಟಿವಿ ವಾಹಿನಿಗಳು, ಪತ್ರಿಕೆಗಳು ಹಾಗೂ ಡಿಜಿಟಲ್ ಪತ್ರಕರ್ತರ ತಂಡ ವರದಿಗೆ ಬಂದಿತ್ತು. ಫೈರಿಂಗ್‌ನಲ್ಲಿ ಮೃತಪಟ್ಟ ಯುವಕರ ಮೃತ ಶರೀರವನ್ನಿರಿಸಲಾಗಿರುವ ವೆನ್‌ಲಾಕ್ ಶವಾಗಾರಕ್ಕೆ ವರದಿಗೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಸ್ಥಳೀಯ ಪತ್ರಕರ್ತರು ಮಾಹಿತಿ ನೀಡಿದ್ದಾರೆ.
ಕೇರಳದ ಖಾಸಗಿ ವಾಹಿನಿ ವರದಿಗಾರರೊಬ್ಬರು ಟಿವಿ ಲೈವ್ ಕೊಡುತ್ತಿದ್ದ ಸಂದರ್ಭದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಹರ್ಷ ಅವರು ತಡೆಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಪತ್ರಕರ್ತರ ತಂಡದ ಬಂಧನ ಸಂದರ್ಭದಲ್ಲಿ ವರದಿಗಾರರು ಮಾರಕಾಸ್ತ್ರ ಹೊಂದಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಪ್ರಕಟಿಸಿದ್ದವು. ಪತ್ರಕರ್ತರ ಬಳಿ ಸರಕಾರ ನೀಡುವ ಅಧಿಕೃತ ಮಾನ್ಯತಾ ಪತ್ರವನ್ನು ಹೊಂದಿಲ್ಲ ಎಂದು ಪೊಲೀಸರು ಆರೋಪಿಸಿದ್ದಾರೆ. ಆದರೆ ಸಂಸ್ಥೆಯ ಗುರುತಿನ ಪತ್ರವನ್ನು ಪತ್ರಕರ್ತರು ತೋರಿಸಿದ್ದಾರೆ.
ಈ ಕುರಿತಾಗಿ ಪತ್ರಿಕ್ರಿಯೆ ನೀಡಿರುವ ಕೇರಳದ ಕಂದಾಯ ಸಚಿವ ಇ. ಚಂದ್ರಶೇಖರನ್, ಕೇರಳದ ಪತ್ರಕರ್ತರುನ್ನು ಮಂಗಳೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿರುವ ಮಾಹಿತಿ ಲಭ್ಯವಾಗಿದೆ. ಈ ಕುರಿತಾಗಿ ಕೇರಳ ಸರಕಾರದ ಮುಖ್ಯಕಾರ್ಯದರ್ಶಿ ಅವರ ಗಮನಕ್ಕೆ ತರಲಾಗಿದೆ ಎಂದಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್