ಮುರ್ಷಿದಾಬಾದ್: ರೈಲಿನ ಇಂಜಿನ್ ಒಂದಕ್ಕೆ ಕಲ್ಲೆಸೆಯುತ್ತಿದ್ದ ದುಷ್ಕರ್ಮಿಗಳನ್ನು ರಾಧಾಮಧಾಬ್ತಲ ಗ್ರಾಮಸ್ಥರು ಮುರ್ಷಿದಾಬಾದ್ ಪೊಲೀಸರಿಗೆ ಹಸ್ತಾಂತರಿಸಿದ್ದು, ಲುಂಗಿ ಹಾಗೂ ತಲೆಗೆ ಟೋಪಿ ಧರಿಸಿದ್ದ ಅವರನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತ ಮತ್ತಾತನ ಐದು ಮಂದಿ ಸಹವರ್ತಿಗಳು ಎಂದು ಗುರುತಿಸಲಾಗಿದೆ.
ಆರೋಪಿಗಳು ಸಿಯಲ್ದಾಹ್-ಲಾಲ್ಗೋಲ ಹಳಿಯಲ್ಲಿ ಸಂಚರಿಸುತ್ತಿದ್ದ ಪ್ರಾಯೋಗಿಕ ರೈಲು ಇಂಜಿನ್‍ಗೆ ಕಲ್ಲೆಸೆದಿದ್ದರು. ಆರೋಪಿಗಳ ಪೈಕಿ ಅಭಿಷೇಕ್ ಸರ್ಕಾರ್ (21) ಎಂಬಾತ ಬಿಜೆಪಿ ಕಾರ್ಯಕರ್ತನಾಗಿದ್ದಾನೆ.
ಆರೋಪಿಗಳು ರೈಲ್ವೆ ಹಳಿಯಲ್ಲಿ ಬಟ್ಟೆ ಬದಲಿಸುತ್ತಿದ್ದುದನ್ನು ಕಂಡು ಗ್ರಾಮಸ್ಥರು ಸಂಶಯಗೊಂಡಿದ್ದರು. ಸರ್ಕಾರ್ ಬಿಜೆಪಿ ಸದಸ್ಯನೆಂದು ಪಕ್ಷದ ಸ್ಥಳೀಯ ಮೂಲಗಳು ತಿಳಿಸಿದರೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಗೌರಿ ಶಂಕರ್ ಘೋಷ್ ಮಾತ್ರ ಆತ ಪಕ್ಷದ ಸದಸ್ಯನಲ್ಲ ಎಂದಿದ್ದಾರೆ.
ಹಿಂಸೆಗೆ ಒಂದು ನಿರ್ದಿಷ್ಟ ಸಮುದಾಯವನ್ನು ದೂರಲು ಬಿಜೆಪಿ ಸ್ಕಲ್ ಕ್ಯಾಪ್ ಖರೀದಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಯಾರು ಪ್ರತಿಭಟಿಸುತ್ತಿದ್ದಾರೆಂಬುದನ್ನು ಅವರು ಧರಿಸಿದ ಬಟ್ಟೆಗಳಿಂದ ಗುರುತಿಸಬಹುದು” ಎಂದು ಜಾರ್ಖಂಡ್ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಹೇಳಿದ್ದು ಕೂಡ ಉಲ್ಲೇಖನೀಯ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ