ಮಂಗಳೂರು ,ಡಿ. 21: ಪೊಲೀಸರ ಗುಂಡಿಗೆ ಬಲಿಯಾದ ನನ್ನ ಮಗನ ಸಾವಿಗೆ ಪರಿಹಾರ ಬೇಡ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಪೋಲೀಸ್ ಗುಂಡೇಟಿನಲ್ಲಿ ಮೃತಪಟ್ಟ ನೌಶೀನ್ ಅವರ ತಾಯಿ ಒತ್ತಾಯಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಮಂಗಳೂರಿನಲ್ಲಿ ಬೆರಳೆಣಿಕೆಯ ಮಂದಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ವೇಳೆ ಹಿಂಸೆಗೆ ಕುಮ್ಮಕ್ಕು ನೀಡಿದ ಪೋಲೀಸರು ಗುಂಡು ಹಾರಿಸಿ ವಿಕೃತ ಆನಂದ ಪಡೆದಿದ್ದರು. ಇವರ ಮೃಗೀಯ ವರ್ತನೆಗೆ ನಗರದಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ನೌಶೀನ್ ಎಂಬ ಯುವಕ ಹಾಗೂ ಬಂದರಿನ ಜಲೀಲ್ ಎಂಬವರು ಮೃತಪಟ್ಟಿದ್ದರು. ನಿನ್ನೆ ಅವರ ಅಂತ್ಯ ಸಂಸ್ಕಾರ ನೆರವೇರಿದ್ದು, ಮೃತರ ಕುಟುಂಬಸ್ಥರನ್ನು ಸಿಎಂ ಯಡಿಯೂರಪ್ಪ ಇಂದು ಮಂಗಳೂರಿಗೆ ತೆರಳಿ ಭೇಟಿ ಮಾಡಿ ಸಮಾಧಾನಪಡಿಸಿದರು.
ಈ ವೇಳೆ ಪೊಲೀಸರು ನನ್ನ ಮಗನನ್ನು ಕೊಂದರು ಎಂದು ಯಡಿಯೂರಪ್ಪ ಅವರ ಬಳಿ ಕಣ್ಣೀರಿಟ್ಟ ಮೃತ ನೌಷೀನ್ ಅವರ ತಾಯಿ ಮುಮ್ತಾಜ್, “ನನ್ನ ಮಗ ಬಂದರಿನಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ, ಪ್ರತಿದಿನ ಅದೇ ದಾರಿಯಲ್ಲಿ ಕೆಲಸಕ್ಕೆ ಹೋಗಿ ಬರುತ್ತಿದ್ದ. ಆದರೆ, ಮೊನ್ನೆ ಪೊಲೀಸರು ನನ್ನ ಮಗನನ್ನು ಕೊಂದೆ ಬಿಟ್ಟರು. ಇದೆಂಥಾ ರಾಜಕೀಯ ಎಂದು ಕಣ್ಣೀರಿಟ್ಟ ಅವರು, ನನ್ನ ಮಗನ ಸಾವಿಗೆ ಪರಿಹಾರವೇನೂ ಬೇಡ ದಯವಿಟ್ಟು ನನ್ನ ಮಗನನ್ನು ಕೊಂದವರಿಗೆ ತಕ್ಕ ಶಿಕ್ಷೆ ನೀಡಿ” ಎಂದು ಒತ್ತಾಯಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್