ಲಖನೌ: ಪೌರತ್ವ ಕಾಯ್ದೆ ವಿರೋಧಿಸಿ ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರತಿಭಟನೆ ವೇಳೆ 8 ವರ್ಷದ ಬಾಲಕ ಸೇರಿದಂತೆ ಒಟ್ಟು 15 ಮಂದಿ ಬಲಿಯಾಗಿರುವುದಾಗಿ ವರದಿಗಳು ತಿಳಿಸಿವೆ.
ಪ್ರತಿಭಟನಾಕಾರರನ್ನು ಪೊಲೀಸರು ಹಿಮ್ಮೆಟ್ಟಿಸುತ್ತಿರುವ ವೇಳೆ ವಾರಣಾಸಿಯಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ 8ರ ಬಾಲಕನೊಬ್ಬ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ. ಇನ್ನು ಮೀರುತ್ ಜಿಲ್ಲೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ.
ಶುಕ್ರವಾರ ಪ್ರಾರ್ಥನೆ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಈ ವೇಳೆ ಹಲವು ಮಂದಿ ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದೆ.
ಘರ್ಷಣೆ ವೇಳೆ 6 ಮಂದಿ ಪೊಲೀಸರಿಗೂ ಗುಂಡಿನ ಗಾಯಗಳಾಗಿದ್ದು, ಈ ಪೈಕಿ ಓರ್ವ ಪೊಲೀಸ್ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಬಿಜ್ನೋರ್, ಸಂಭಾಲ್, ಫಿರೋಜಾಬಾದ್, ಕಾನ್ಪುರ, ವಾರಣಾಸಿ ಹಾಗೂ ಮೀರುತ್ ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎಂದು ವರದಿಗಳು ತಿಳಿಸಿವೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ