ಬೆಂಗಳೂರು, ಡಿ.22- ಮಂಗಳೂರು ಗೋಲಿಬಾರ್ ಪ್ರಕರಣದಲ್ಲಿ ಮರಣ ಹೊಂದಿರುವ ಇಬ್ಬರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಲಿಬಾರ್ ಘಟನೆ ಬಗ್ಗೆ ಮತ್ತೊಮ್ಮೆ ವಿಷಾದ ವ್ಯಕ್ತಪಡಿಸಿದರು.
ನಿನ್ನೆ ಮಂಗಳೂರಿಗೆ ತೆರಳಿ ಮೃತರ ಕುಟುಂಬದ ಜತೆ ಸಮಾಲೋಚನೆ ನಡೆಸಿದ್ದೇನೆ. ಕಾನೂನಾತ್ಮಕವಾಗಿ ಪರಿಶೀಲಿಸಿ ಮೃತಪಟ್ಟಿರುವ ನೌಶಿನ್ ಮತ್ತು ಜಲೀಲ್ ಇಬ್ಬರ ಕುಟುಂಬಕ್ಕೂ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಹೇಳಿದರು. ಗೋಲಿಬಾರ್ ಘಟನೆ ಬಗ್ಗೆ ತನಿಖೆ ನಡೆಸಲು ನಿರ್ಧರಿಸಲಾಗಿದೆ.
ಆದರೆ ಯಾವ ಸ್ವರೂಪದ ತನಿಖೆ ಎಂಬುದನ್ನು ಗೃಹ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು. ಮಂಗಳೂರಿಗೆ ತೆರಳಲು ನಾವು ಯಾರಿಗೂ ಅಡ್ಡಿಪಡಿಸಿಲ್ಲ. ವಿರೋಧ ಪಕ್ಷದ ಸಿದ್ದರಾಮಯ್ಯ ಸೇರಿದಂತೆ ಯಾರು ಬೇಕಾದರೂ ಮಂಗಳೂರಿಗೆ ತೆರಳಬಹುದು. ಯಾರನ್ನೂ ನಿರ್ಬಂಧಿಸುವುದಿಲ್ಲ ಎಂದು ಹೇಳಿದರು. ಮಂಗಳೂರಿನಲ್ಲಿ ಪರಿಸ್ಥಿತಿ ಶಾಂತವಾಗಿದೆ. ಅನಗತ್ಯವಾಗಿ ಪ್ರಚೋದನೆ ಮಾಡದೆ ಶಾಂತಿ ಕಾಪಾಡಲು ಎಲ್ಲರೂ ಸಹಕರಿಸಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ