ಮಂಗಳೂರು, ಡಿ.28- ಚಾರ್ಮಾಡಿ ಘಾಟ್ ರಸ್ತೆ ದುರಸ್ತಿ ಹಿನ್ನೆಲೆಯಲ್ಲಿ ನಿನ್ನೆಯಿಂದ ಘನ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಆದರೆ ಲಘು ವಾಹನಗಳ ಸಂಚಾರಕ್ಕೆ ಯಾವುದೇ ತೊಂದರೆಯಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹೇಳಿದ್ದಾರೆ.
ಕಾರು, ಮಿನಿ ಟೆಂಪೋ ಹಾಗೂ ಮಿನಿ ಕೆ.ಎಸ್.ಆರ್.ಟಿ.ಸಿ ಬಸ್ಗಳಿಗೆ ಮಾತ್ರ ಈ ರಸ್ತೆಯಲ್ಲಿ ಸಂಚರಿಸುವ ಅವಕಾಶ ಕಲ್ಪಿಸಲಾಗಿದೆ. ಭಾರಿ ವಾಹನಗಳಾದ ಟ್ಯಾಂಕರ್, ರಾಜಹಂಸ ಬಸ್ ಸೇರಿದಂತೆ ಇತರೆ ವಾಹನಗಳ ಸಂಚಾರ ನಿಷೇಧ ಮಾಡಲಾಗಿದ್ದು ಮುಂದಿನ ಆದೇಶದವರೆಗೂ ಈ ವ್ಯವಸ್ಥೆ ಜಾರಿಯಲ್ಲಿದೆ.
ಮುಂದಿನ ಆದೇಶದವರೆಗೂ ಪರ್ಯಾಯ ರಸ್ತೆ ಮೂಲಕ ತೆರಳಲು ಪ್ರಯಾಣಿಕರಿಗೆ ಸೂಚನೆ ನೀಡಲಾಗಿದೆ. ಕಾರ್ಕಳ-ಸಂಸೆ-ಕುದುರೆಮುಖ ರಸ್ತೆ ಮತ್ತು ಶಿರಾಡಿ ರಸ್ತೆಗ ಮೂಲಕ ಪ್ರಯಾಣಿಕರು ತೆರಳಲು ಅವಕಾಶ ನೀಡಲಾಗಿದೆ. ಚಾರ್ಮಾಡಿ ಘಾಟ್ ಮಂಗಳೂರು-ಕಡೂರು ರಾಷ್ಟ್ರೀಯ ಹೆದ್ದಾರಿಯಲ್ಲಿದೆ.
ಈ ವರ್ಷ ಮಲೆನಾಡು ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟ್ನಲ್ಲಿ ಪದೇ ಪದೇ ಭೂ ಕುಸಿತ ಉಂಟಾಗಿತ್ತು.ಹೀಗಾಗಿ ಆಗಸ್ಟ್ ತಿಂಗಳಿಂದ ಚಾರ್ಮಾಡಿ ಘಾಟ್ನಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಇದೀಗ ಸಾರ್ವಜನಿಕರ ಹಿತದೃಷ್ಟಿಯಿಂದ ಇಂದಿನಿಂದ ಮಿನಿಲಘು ವಾಹನಗಳ ಸಂಚಾರ ಆರಂಭಕ್ಕೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್