ಮಂಗಳೂರು: ಡಿಸೆಂಬರ್ 19ರಂದು ನಗರದಲ್ಲಿ ನಡೆದ ಗಲಭೆ ಮತ್ತು ಗೋಲಿಬಾರ್ ಬಳಿಕ ಫೇಸ್ ಬುಕ್, ವಾಟ್ಸ್ ಆಪ್ ಮತ್ತಿತರ ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶ ಕಳುಹಿಸಿ ಪೊಲೀಸರ ವಿರುದ್ಧ ದಾಳಿ ಮಾಡಿ, ರಕ್ತಪಾತ ನಡೆಸುವಂತೆ ಪ್ರಚೋದಿಸುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಸೈಬರ್ ಅಪರಾಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ಪಾಂಡೇಶ್ವರ ನಿವಾಸಿ ಮೊಯ್ದೀನ್ ಹಫೀಜ್ ಬಂಧಿತ ಯುವಕ. ಈತ ಫೇಸ್ ಬುಕ್ ಮತ್ತು ವಾಟ್ಸ್ ಆಪ್ ನಲ್ಲಿ ಪ್ರಚೋದನಕಾರಿ ಸಂದೇಶ ಕಳುಹಿಸಿದ್ದ. ಪ್ರತಿಭಟನಾಕಾರರ ಮೇಲೆ ಗೋಲಿಬಾರ್ ನಡೆಸಿದ್ದ ಪೊಲೀಸರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವಂತೆ ಜನರನ್ನು ಪ್ರಚೋದಿಸುತ್ತಿದ್ದ ಎಂದು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ತಿಳಿಸಿದ್ದಾರೆ.
ಆರೋಪಿಯ ವಿರುದ್ಧ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ ಬಳಿಕವೂ ಪ್ರಚೋದನಕಾರಿ ಸಂದೇಶ ಪೋಸ್ಟ್ ಮಾಡುವುದನ್ನು ಮುಂದುವರಿಸಿದ್ದ ಎಂದು ಮಾಹಿತಿ ನೀಡಿದ್ದಾರೆ.
ಪ್ರತಿಭಟನೆ ವೇಳೆ ಗಲಭೆಗೆ ಪ್ರಚೋದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿದ ಹಾಗೂ ಗೋಲಿಬಾರ್ ನಂತರ ಪೊಲೀಸರ ಮೇಲೆ ದಾಳಿಗೆ ಮತ್ತು ಹಿಂಸೆಗೆ ಪ್ರಚೋದಿಸಿ ಸಂದೇಶ ಹಾಕಿದ ಆರೋಪದ ಮೇಲೆ 100ಕ್ಕೂ ಹೆಚ್ಚು ಮಂದಿಗೆ ನೋಟಿಸ್ ನೀಡಲಾಗಿದೆ. ವಿಚಾರಣೆ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಕಮಿಷನರ್ ತಿಳಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್