ಮಂಗಳೂರು: ಎನ್‌ಆರ್‌ಸಿ ಮತ್ತು ಸಿಎಎ ಕುರಿತು ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ಜ.4ರಂದು ಅಸಹಕಾರ ಚಳುವಳಿ ನಡೆಸಲು ನಿರ್ಧರಿಸಲಾಗಿತ್ತು.ಈ ಮಧ್ಯೆ ಬಿಜೆಪಿಯವರು ಕೂಡ ಜ.12ರಂದು ಜನಜಾಗೃತಿ ಸಭೆ ನಡೆಸಲು ಮುಂದಾಗಿದ್ದಾರೆ.
ಶಾಂತಿ ಸುವ್ಯವಸ್ಥೆಯ ಹಿನ್ನೆಲೆಯಲ್ಲಿ ಮತ್ತು ವಾತಾವರಣ ತಿಳಿಯಾಗುವವರೆಗೆ ಅಂದರೆ 10 ದಿನದ ಮಟ್ಟಿಗೆ ಈ ಎರಡೂ ಕಾರ್ಯಕ್ರಮವನ್ನು ಮುಂದೂಡುವಂತೆ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಅಸಹಕಾರ ಚಳುವಳಿ ನಡೆಸುವ ಮುಂದಿನ ದಿನಾಂಕ ಅಂತಿಮಗೊಳಿಸಿಲ್ಲ ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಕೆ.ಎಸ್. ಮುಹಮ್ಮದ್ ಮಸೂದ್ ಹೇಳಿದ್ದಾರೆ.
ದ.ಕ.ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿಯ ಅಧ್ಯಕ್ಷತೆಯಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಮಾಲೋಚನಾ ಸಭೆಯ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಈ ಬಗ್ಗೆ ಮುಸ್ಲಿಂ ಸಂಘಟನೆಗಳ* ಪ್ರತಿನಿಧಿಗಳ ಜೊತೆ ಸಮಾಲೋಚನೆ ನಡೆಸಿ ದಿನಾಂಕವನ್ನು ಅಂತಿಮಗೊಳಿಸಲಿದ್ದೇವೆ ಎಂದು ಪತ್ರಕರ್ತರ ಪ್ರಶ್ನೆಗೆ ಮುಹಮ್ಮದ್ ಮಸೂದ್ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್