ಟೆಹ್ರಾನ್: ಇತ್ತೀಚೆಗೆ ಇರಾಕ್ ಅಂತಾರಾಷ್ಟ್ರ ವಿಮಾನ ನಿಲ್ದಾಣ ಸಮೀಪ ಅಮೆರಿಕಾ ನಡೆಸಿದ ಡ್ರೋನ್ ದಾಳಿಯಲ್ಲಿ ಇರಾನ್ ಜನರಲ್ ಕಮಾಂಡರ್ ಖಾಸಿಮ್ ಸುಲೈಮಾನಿಯವರನ್ನು ಹತ್ಯೆಗೈದುದಕ್ಕೆ ಪ್ರತಿಕಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತಲೆ ತೆಗೆಯುವವರಿಗೆ 575 ಕೋಟಿ ರುಪಾಯಿಯನ್ನು ಬಹುಮಾನವನ್ನು ಇರಾನ್ ಸರ್ಕಾರ ಘೋಷಿಸಿದೆ ಎನ್ನಲಾಗಿದೆ.
ಖಾಸಿಮ್ ಅಂತಿಮ ಯಾತ್ರೆಯ ಮೆರವಣಿಗೆ ಸಂದರ್ಭದಲ್ಲಿ ಸುದ್ದಿಯನ್ನು ಪ್ರಸಾರ ಮಾಡಿದ್ದ ಇರಾನ್ ನ ಅಧಿಕೃತ ಟಿವಿ ಚಾನೆಲ್ ಗಳಲ್ಲಿ ದೇಶದ ಪ್ರತಿಯೊಬ್ಬ ಇರಾನಿ ಪ್ರಜೆ ಒಂದು ಡಾಲರ್ ಕೊಟ್ಟರೂ ಅದನ್ನು ಡೊನಾಲ್ಡ್ ಟ್ರಂಪ್ ಹತ್ಯೆಗೈದವರಿಗೆ ಸೇರಲಿದೆ ಎಂದು ಅಮೆರಿಕ ಮಿರರ್ ಡಾಟ್ ಕಾಮ್ ವರದಿ ಮಾಡಿದೆ.
ಇರಾನಿನಲ್ಲಿ 80 ಮಿಲಿಯನ್ ಜನರಿದ್ದಾರೆ. ಹೀಗಾಗಿ ಪ್ರತಿಯೊಬ್ಬರೂ 1 ಡಾಲರ್ ನೀಡಿದರೂ ಅದು ಸುಮಾರು 575 ಕೋಟಿ ರುಪಾಯಿ ಆಗಲಿದೆ. ಈ ಹಣವನ್ನು ಟ್ರಂಪ್ ಹತ್ಯೆಗೈಯುವವರಿಗೆ ನೀಡಲಾಗುವುದು ಎಂದು ಘೋಷಿಸಿರುವುದಾಗಿ ವರದಿ ವಿವರಿಸಿದೆ.
ಡ್ರೋನ್ ದಾಳಿಯಲ್ಲಿ ಇರಾಕ್ ಅರೆ ಸೇನಾಪಡೆಯ ಡೆಪ್ಯುಟಿ ಮುಖ್ಯಸ್ಥ ಅಬು ಮಹ್ದಿ ಅಲ್ ಮುಹಂದಿಸ್ ಸೇರಿದಂತೆ 8 ಮಂದಿ ಹತರಾಗಿದ್ದರು.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ