ಬೆಂಗಳೂರು.ಜ,07: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ನಾಳೆ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಬಂದ್ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.
“ರಾಜ್ಯದ ಎಲ್ಲಾ ನಗರಗಳು, ಅದರಲ್ಲೂ ಬೆಂಗಳೂರಿನಲ್ಲಿ ಜನಜೀವನ ಎಂದಿನಂತೇ ಸಾಮಾನ್ಯವಾಗಿರುತ್ತದೆ ಮತ್ತು ಅವರ ದಿನನಿತ್ಯದ ಕಾರ್ಯಗಳಿಗೆ ಯಾವುದೇ ತಡೆ ಇರುವುದಿಲ್ಲ.” ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮುಖ್ಯಮಂತ್ರಿ ಹೇಳಿದ್ದಾರೆ.
“ಶಾಲಾ-ಕಾಲೇಜು ಎಂದಿನಂತೆ ಕಾರ್ಯನಿರ್ವಹಿಸುತ್ತವೆ ಮತ್ತು ಸಾರಿಗೆ ಸೇವೆ ಕೂಡ ಸಾಮಾನ್ಯವಾಗಿರುತ್ತದೆ. ಯಾವುದೇ ಸಮಾಜ ವಿರೋಧಿ ಶಕ್ತಿಗಳು ಬಂದ್ ನಲ್ಲಿ ಭಾಗವಹಿಸಲು ಒತ್ತಾಯ ಮಾಡಿದರೆ ಅಥವಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲು ಪ್ರಯತ್ನಿಸಿದರೆ ಪೊಲೀಸರು ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಾರೆ.” ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.
“ಬಂದ್ಗಳು ಜನವಿರೋಧಿಯೆಂದು ಹಿಂದೆ ಸುಪ್ರೀಂಕೋರ್ಟ್ ಹೇಳಿದೆ. ಈ ವಿಷಯ ಬಂದ್ಗೆ ಕರೆ ಕೊಟ್ಟವರ ಗಮನದಲ್ಲಿ ಇರಬೇಕು. ಜನರು ಯವುದೇ ಪ್ರಚೋದನೆಗೆ ಒಳಗಾಗದೆ ಶಾಂತಿ ಕಾಪಾಡಿಕೊಂಡು ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು ಎನ್ನುವುದು ನನ್ನ ಕಳಕಳಿಯ ಮನವಿ” ಎಂದು ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ