ದಾರುಲ್ ಅಮಾನ್ ದಅವಾ ಕಾಲೇಜಿನ ವಿದ್ಯಾರ್ಥಿಗಳು ರಸ್ತೆ ದುರಸ್ತಿ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದರು.ದಾರುಲ್ ಅಮಾನ್ ಸಂಸ್ಥೆಯಿಂದ ಒಂದುವರೆ ಕಿಲೋಮೀಟರ್ ದೂರವಿರುವ ಪೆಜತಕಟ್ಟೆ ವರೆಗಿನ ರಸ್ತೆ ಹದಗೆಟ್ಟಿದ್ದು ವಾಹನ ಚಾಲಕರಿಗೆ ತುಂಬಾ ತೊಂದರೆ ಆಗುತ್ತಿತ್ತು.


ಸಂಸ್ಥೆಯಲ್ಲಿ ಪ್ರತಿ ತಿಂಗಳ ಪ್ರಥಮ ಶುಕ್ರವಾರ ಸ್ವಲಾತ್ ಕಾರ್ಯಕ್ರಮ ನಡೆಯುತ್ತಿದ್ದು ಇದರಿಂದ ವಿದೂರದಿಂದ ಆಗಮಿಸುವ ಪ್ರಯಾಣಿಕರು ತೊಂದರೆಗೊಳ ಗಾಗುತ್ತಿದ್ದಾರೆ. ಇದನ್ನು ಮನಗಂಡ ದಾರುಲ್ ಅಮಾನ್ ಸಂಸ್ಥೆಯು ಅಹ್ಮದುಲ್ ಕಬೀರ್ ರಿಫಾಯಿ(ರ) ಅನುಸ್ಮರಣೆ ಅಂಗವಾಗಿ ವಿದ್ಯಾರ್ಥಿಗಳ ಸಹಕಾರದಿಂದ ಹೊಂಡ ಬಿದ್ದ ರಸ್ತೆಗೆ ಮಣ್ಣು ತುಂಬಿಸಿ ಬಹಳ ಅಚ್ಚುಕಟ್ಟಾಗಿ ಈ ಕಾರ್ಯವನ್ನು ನಿರ್ವಹಿಸಿದೆ. ಅಮಾನ್ ದಅವಾ ಕಾಲೇಜಿನ ಪ್ರಾಂಶುಪಾಲರಾದ ಅಬ್ದುಲ್ ನಾಸಿರ್ ಮುಈನಿ ಹಾಗೂ ಮೇನೆಜರಾದ ಆಶಿಕ್ ಮುಈನಿಯವರ ನಿರ್ದೇಶನದ ಮೇರೆಗೆ ಈ ಕೆಲಸ ಪೂರ್ಣಗೊಂಡಿತು.
24 ವಿದ್ಯಾರ್ಥಿಗಳಿಂದ ನಾಲ್ಕು ತಂಡಗಳಾಗಿ ವಿಭಾಗಿಸಿ ಮುಷರ್ರಫ್ ಹಿರೆ ಬಂಡಾಡಿ ಆಶಿಕ್ ಬೋಗಡಿ ಶಾಹಿದ್ ಮಂಚಿ ಸಂಶುದ್ದೀನ್ ಕುಪ್ಪೆಟ್ಟಿ ನಾಯಕತ್ವದಲ್ಲಿ ಕಾರ್ಯ ಯಶಸ್ವಿಯಾಗಿ ನಡೆಯಿತು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ