ದೋಹಾ: ಏರ್ ಇಂಡಿಯಾ ಸಂಸ್ಥೆಯು ದೋಹಾದಿಂದ ಮುಂಬೈಗೆ ಹೊಸ ಸೇವೆಯನ್ನು ಪ್ರಾರಂಭಿಸಲಿದೆ. ವಾರದಲ್ಲಿ ಮೂರು ದಿನ ಹೊಸ ಸೇವೆ ಲಭ್ಯವಿದ್ದು, ಬುಕಿಂಗ್ ಈಗಾಗಲೇ ಪ್ರಾರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏರ್ ಇಂಡಿಯಾ ತನ್ನ ಹೊಸ ಸೇವೆಯನ್ನು ದೋಹಾ ಮುಂಬೈ ವಲಯದಲ್ಲಿ ಫೆಬ್ರವರಿ 21ರಿಂದ ಪ್ರಾರಂಭಿಸಲಿದೆ. ವಾರದ ಶುಕ್ರವಾರ, ರವಿವಾರ ಮತ್ತು ಮಂಗಳವಾರ ಸೇವೆ ಲಭ್ಯವಾಗಲಿದೆ. ಮಧ್ಯಾಹ್ನ 12:45 ಕ್ಕೆ ದೋಹಾದಿಂದ ಹೊರಟು ಭಾರತೀಯ ಸಮಯ ಸಂಜೆ 6:45 ಕ್ಕೆ ಮುಂಬೈಗೆ ತಲುಪಲಿದೆ.
ಈ ವಿಮಾನ ಮುಂಬೈಯಿಂದ ಬೆಳಗ್ಗೆ 10:20 ಕ್ಕೆ ಹೊರಟು ಖತರ್ ಸಮಯ ಮಧ್ಯಾಹ್ನ 11:15 ಕ್ಕೆ ದೋಹಾ ತಲುಪಲಿದೆ. ಬೇಸಿಗೆ ಕಾಲ ಪ್ರಾರಂಭವಾಗುತ್ತಿದ್ದಂತೆ ಮಾರ್ಚ್ ಅಂತ್ಯದ ವೇಳೆಗೆ ಸೇವೆಯ ಸಮಯದಲ್ಲಿ ಬದಲಾವಣೆ ಉಂಟಾಗಲಿದೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಪ್ರಸ್ತುತ ದೋಹಾ ಮುಂಬೈ ವಲಯದಲ್ಲಿ ವಾರದಲ್ಲಿ ಐದು ದಿನ ಕಾರ್ಯನಿರ್ವಹಿಸುತ್ತಿದೆ. ಇದರ ಹೊರತಾಗಿ ಏರ್ ಇಂಡಿಯಾದ ಹೊಸ ಸೇವೆ ಪ್ರಾರಂಭಗೊಂಡಿದ್ದು, ಹೊಸ ಸೇವೆಗಾಗಿ ಟಿಕೆಟ್ ಕಾಯ್ದಿರಿಸುವಿಕೆ ಈಗಾಗಲೇ ಪ್ರಾರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಸ್ತುತ ದೋಹಾದಿಂದ ಮುಂಬೈಗೆ 735 ರಿಯಾಲ್ ಮತ್ತು ಮುಂಬೈನಿಂದ ದೋಹಾಕ್ಕೆ 785 ರಿಯಾಲ್ ನಿಗದಿಪಡಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ