ನವದೆಹಲಿ: ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಬುಧವಾರ, ಪ್ರಧಾನಿ ನರೇಂದ್ರ ಮೋದಿ ಅವರ ಪೋಷಕರ ಜನನ ಪ್ರಮಾಣಪತ್ರವನ್ನು ತೋರಿಸಿದರೆ ಜನರು ಕೂಡ ಸಂಬಂಧಿತ ದಾಖಲೆಗಳನ್ನು ನೀಡುತ್ತಾರೆ ಎಂದು ಹೇಳಿದರು.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಹೊಸ ಪೌರತ್ವ ಕಾಯ್ದೆ ಮತ್ತು ಎನ್ಆರ್ಸಿಯನ್ನು ವಿರೋಧಿಸುವ ನಿರ್ಣಯವನ್ನು ಅಂಗೀಕರಿಸಿದ ನಾಲ್ಕು ದಿನಗಳ ನಂತರ ದಿಗ್ವಿಜಯ ಸಿಂಗ್ ಅವರ ಹೇಳಿಕೆ ಬಂದಿದೆ.
‘ಪ್ರಧಾನಿ ಮೋದಿ ಅವರ ತಂದೆ ಮತ್ತು ತಾಯಿಯ ಜನನ ಪ್ರಮಾಣಪತ್ರವನ್ನು ನಮಗೆ ತೋರಿಸಬೇಕು ಎಂದು ನಾವು ಹೇಳುತ್ತಿದ್ದೇವೆ, (ಮತ್ತು ಅದನ್ನು ಮಾಡಿದರೆ) ನಾವು ಸಂಬಂಧಿಸಿದ ಎಲ್ಲ ದಾಖಲೆಗಳನ್ನು ತಯಾರಿಸುತ್ತೇವೆ’ ಎಂದು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಎನ್ಆರ್ಸಿ ವಿರೋಧಿ ಪ್ರತಿಭಟನಾಕಾರರ ಬಗ್ಗೆ ಕೇಳಿದಾಗ ಹೇಳಿದರು.
ಇನ್ನು ಮುಂದುವರೆದು ಅಂತಹ ಕಾನೂನನ್ನು ಜಾರಿಗೆ ತಂದರೆ ಯಾವುದೇ ದಾಖಲೆಗಳನ್ನು ಸರ್ಕಾರಿ ಅಧಿಕಾರಿಗಳಿಗೆ ನೀಡುವುದಿಲ್ಲ ಎಂದು ಹೇಳಿದರು.ಸಂಸತ್ತಿನ ನಗರಾಭಿವೃದ್ಧಿ ಸ್ಥಾಯಿ ಸಮಿತಿಯ ಇತರ ಸದಸ್ಯರೊಂದಿಗೆ ದಿಗ್ವಿಜಯ ಸಿಂಗ್ ಇಂದೋರ್ಗೆ ಭೇಟಿ ನೀಡಿದ್ದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ