janadhvani

Kannada Online News Paper

ಬಾಂಬ್: ಶರಣಾದ ವ್ಯಕ್ತಿ ಮುಸ್ಲಿಂ ಆಗಿದ್ದಲ್ಲಿ ಏನಾಗ್ತಿತ್ತು?- ಎಚ್ಡಿಕೆ ಪ್ರಶ್ನೆ

ಬೆಂಗಳೂರು: ಮಂಗಳೂರು ಬಾಂಬ್ ಪ್ರಕರಣದಲ್ಲಿ ಶರಣಾಗತನಾಗಿರುವ ವ್ಯಕ್ತಿ ಮುಸ್ಲಿಂ ಆಗಿದ್ದಿದ್ದರೆ ಕತೆಯೇ ಮುಗಿದುಬಿಡುತ್ತಿತ್ತು, ಒಬ್ಬೊಬ್ಬರು ಒಂದೊಂದು ಬಗೆಯಲ್ಲಿ ಮಾತನಾಡುತ್ತಿದ್ದರು, ಇಂದು ಯಾರೊಬ್ಬರ ಸುದ್ದಿಯೂ ಇಲ್ಲ ಎಂದು ಜೆಡಿ ಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಕೆಲವು ಅಧಿಕಾರಿಗಳು ಸರ್ಕಾರವನ್ನು ಮೆಚ್ಚಿಸಲು ಏನೇನೋ ಮಾಡುತ್ತಿರುವಂತಿದೆ, ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಿದ್ದರೆ ರಾಜ್ಯದಲ್ಲಿ ಹೂಡಿಕೆ ಮಾಡಲು ಯಾರು ಮುಂದೆ ಬರುತ್ತಾರೆ ಎಂದು ಅವರು ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣದ ಆರೋಪಿ ಉಡುಪಿ ಮೂಲದ ಆದಿತ್ಯ ರಾವ್ ಬುಧವಾರ ಬೆಂಗಳೂರಿನಲ್ಲಿ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಡಿಜಿಪಿ-ಐಜಿಪಿ ನೀಲಮಣಿ ಎನ್. ರಾಜು ಅವರ ಕಚೇರಿಗೆ ಬಂದು ಶರಣಾಗಿದ್ದ.