ಬೆಂಗಳೂರು,ಜ.27: ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವೈಮಾನಿಕ ಸಂಸ್ಥೆಯನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ನಡೆಸುತ್ತಿರುವ ಪ್ರಯತ್ನಕ್ಕೆ ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದು, ಇದು ದೇಶದ್ರೋಹದ ಕೆಲಸ ಎಂದು ಹರಿಹಾಯ್ದಿದ್ದಾರೆ.
Air India disinvestment process restarts today https://t.co/72eklh9C3g: THIS DEAL IS WHOLLY ANTI NATIONAL and IWILL FORCED TO GO TO COURT. WE CANNOT SELL OUR FAMILY SILVER
— Subramanian Swamy (@Swamy39) January 27, 2020
ಏರ್ ಇಂಡಿಯಾದಲ್ಲಿ ತಾನು ಹೊಂದಿರುವ ಎಲ್ಲಾ ಷೇರುಗಳನ್ನೂ ಬಿಟ್ಟುಕೊಡಲು ಸರ್ಕಾರ ನಿರ್ಧರಿಸಿದೆ. ಏರ್ ಇಂಡಿಯಾ ಖರೀದಿಸಲು ಇಚ್ಛಿಸುವವರು ಮಾರ್ಚ್ 17ರಷ್ಟರಲ್ಲಿ ಬಿಡ್ ಸಲ್ಲಿಸಬೇಕೆಂದು ಡೆಡ್ಲೈನ್ ವಿಧಿಸಿದೆ. ಈ ಬಗ್ಗೆ ಟೀಕಿಸಿರುವ ಅವರು, ಈ ಒಪ್ಪಂದ ಸಂಪೂರ್ಣವಾಗಿ ದೇಶದ್ರೋಹ, ಇದರ ವಿರುದ್ಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕಾಗುತ್ತದೆ. ನಮ್ಜ ಕುಟುಂಬದ ಆಸ್ತಿಯನ್ನು ಮಾರಾಟ ಮಾಡುವುದು ಸರಿಯಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಏರ್ ಇಂಡಿಯಾ ಮಾರಾಟ ಮಾಡುವ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರ ಆರ್ಥಿಕವಾಗಿ ಕುಸಿದಿದೆ. ಹಣವಿಲ್ಲದ ಕಾರಣ ಸರ್ಕಾರದ ಆಸ್ತಿಗಳ ಮಾರಾಟಕ್ಕೆ ಮುಂದಾಗಿದೆ ಎಂದು ಕಪಿಲ್ ಸಿಬಲ್ ಟೀಕಿಸಿದ್ದಾರೆ.






