ಬೆಂಗಳೂರು, ಜ.30: ಹಾಲಿನ ದರವನ್ನು ಹೆಚ್ಚಿಸುವ ಕುರಿತು ಸಲ್ಲಿಸಲಾಗಿದ್ದ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಫೆ.1ರಿಂದ ಪ್ರತಿ ಲೀಟರ್‌ಗೆ 2 ರೂ ಏರಿಕೆಯಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ನಂದಿನಿ ಬ್ರ್ಯಾಂಡ್‌ನಲ್ಲಿ ಹಾಲು, ಮೊಸರು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ‘ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್)’ ಹಾಲಿನ ದರ ಏರಿಕೆ ಮಾಡುವಂತೆ ರಾಜ್ಯ ಸರಕಾರದ ಮುಂದೆ ಪ್ರಸ್ತಾವನೆ ಇಟ್ಟಿತ್ತು. ಇದಕ್ಕೆ ರಾಜ್ಯ ಸರಕಾರ ಒಪ್ಪಿಗೆ ನೀಡುವುದರೊಂದಿಗೆ ದರ ಏರಿಕೆ ಜಾರಿಗೆ ಬಂದಿದೆ.
ಕಳೆದ ಮೂರು ವರ್ಷಗಳಿಂದ ನಂದಿನಿ ಹಾಲಿನ ದರ ಹೆಚ್ಚಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರು ಹೆಚ್ಚಿನ ಲಾಭ ನೀಡುವಂತೆ ಒತ್ತಾಯಿಸುತ್ತಾ ಬಂದಿದ್ದರು. ಇದಕ್ಕೆ ದನಿಗೂಡಿಸಿದ್ದ 14 ಜಿಲ್ಲಾ ಹಾಲು ಒಕ್ಕೂಟಗಳು ಲೀಟರ್‌ಗೆ 2-3 ರೂ. ದರ ಏರಿಕೆ ಮಾಡುವಂತೆ ಕೆಲವು ದಿನಗಳ ಹಿಂದೆ ಕೆಎಂಎಫ್‌ಗೆ ಮನವಿ ಮಾಡಿದ್ದವು. ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೂಡ ದರ ಏರಿಕೆಗೆ ಒಲವು ತೋರಿದ್ದರು.
ದರ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಾಲಚಂದ್ರ ಜಾರಕಿಹೊಳಿ, “ಹಾಲಿನ ದರ ಹೆಚ್ಚಳ ಅನಿವಾರ್ಯವಾಗಿತ್ತು. ಪ್ರತಿ ಲೀಟರ್ ಗೆ ನಾಲ್ಕು ರೂ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇತ್ತು. ಆದರೆ, ಜನರ ಮೇಲೆ ಹೆಚ್ಚಿನ ಹೊರೆಯಾಗಬಾರದು ಹಾಗೂ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎರಡು ರೂ. ಹೆಚ್ಚಿಸಲಾಗಿದೆ,” ಎಂದು ವಿವರಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ