ಬೆಂಗಳೂರು,ಫೆ.2: -ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ ಅತ್ಯಂತ ವಾಗಿದ್ದು, ದೇಶದ ಪ್ರಗತಿ ಬಗ್ಗೆ ಮುಂದಿನ ದಿನಗಳಲ್ಲಿ ಆಸೆ ಇಟ್ಟುಕೊಳ್ಳದ ಪರಿಸ್ಥಿತಿ ಸೃಷ್ಟಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಕೇಂದ್ರ ಬಜೆಟ್ ಕುರಿತು ನಗರದಲ್ಲಿಂದು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಕೇವಲ ಅಂಕಿ ಅಂಶಗಳ ಬಜೆಟ್. ಕಳೆದ ಐದು ವರ್ಷಗಳಲ್ಲಿ ಘೋಷಣೆ ಆಗಿರುವ ಎಷ್ಟೋ ಯೋಜನೆಗಳು ಜಾರಿಯೇ ಆಗಿಲ್ಲ. ಹಣ ಹಂಚಿಕೆಯಲ್ಲಿಯೂ ಭಾರಿ ಕಡಿತವಾಗಿದೆ. ಜಲಮಿಷನ್ಗೆ ಮೀಸಲಿಟ್ಟಿರುವ ಹಣದಿಂದ ಯಾವುದೇ ಜನರಿಗೆ ಅನುಕೂಲ ಆಗುವುದಿಲ್ಲ. ಕೆಲವೊಂದು ಯೋಜನೆಗಳಿಗೆ ಹೊಸ ಹೆಸರು ಇಟ್ಟಿರಬಹುದು ಅಷ್ಟೆ ಎಂದರು.
ಕಿಸಾನ್ ಉಡಾನ್ ಹೆಸರಲ್ಲಿ ರೈತರನ್ನು ಆಕಾಶದ ಮೇಲೆ ಓಡಾಡಿಸುತ್ತಾರೆಯೇ ಎಂದು ವ್ಯಂಗ್ಯವಾಡಿದ ಅವರು, ಯುವಕರಿಗೆ ಯಾವ ರೀತಿ ಉದ್ಯೋಗ ಕೊಡುತ್ತೇವೆ ಎಂದು ಹೇಳಿಲ್ಲ. ಇಂಟರ್ನ್ ಶಿಪ್ ಕೊಡುವುದಾಗಿ ಹೇಳಿದ್ದಾರೆ, ಆದರೆ ಅವರಿಗೆ ಉದ್ಯೋಗ ಕೊಡುವುದು ಯಾರು? ಎಂದು ಪ್ರಶ್ನಿಸಿದರು.
ಈ ಬಜೆಟ್ ಕುಸಿಯುತ್ತಿರುವ ದೇಶದ ಆರ್ಥಿಕ ವ್ಯವಸ್ಥೆಯನ್ನು ಸರಿಪಡಿಸುವುದಿಲ್ಲ. ಬದಲಿಗೆ ಮತ್ತಷ್ಟು ಅಧೋಗತಿಗೆ ತೆಗೆದುಕೊಂಡು ಹೋಗುತ್ತದೆ. ಭೂ ಸ್ವಾಧೀನ ಮಾಡಿಕೊಂಡು ಯಾರಿಗೆ ಬೇಕಾದರೂ ಭೂಮಿ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಇದು ಮತ್ತೊಂದು ರೀತಿಯ ಪೌರತ್ವ ತಿದ್ದುಪಡಿ ಕಾಯ್ದೆಯಂತಾಗುತ್ತದೆ ಎಂದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ