ನವದೆಹಲಿ: ಕೇಂದ್ರದ ಆಡಳಿತಾರೂಢ ಎನ್’ಡಿಎ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರು ದನಿ ಎತ್ತಿದ್ದು, ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸುವುದನ್ನು ನಿಲ್ಲಿಸಿ ಎಂದು ಘೋಷಣೆ ಕೂಗುತ್ತಿದ್ದಾರೆ. ಲೋಕಶಭೆಯಲ್ಲಿ 2020 ಬಜೆಟ್ ಅಧಿವೇಶನ ನಡೆಸುತ್ತಿದ್ದು, ಅಧಿವೇಶನದ ಪ್ರಶ್ನಾವಳಿ ಅವಧಿಯಲ್ಲಿ ವಿರೋಧ ಪಕ್ಷಗಳ ನಾಯಕರು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ಘೋಷಣೆಗಳನ್ನು ಕೂಗಿದ್ದಾರೆಂದು ವರದಿಗಳು ತಿಳಿಸಿವೆ.
ಸಿಎಎಗೆ ಬೇಡ ಎನ್ನಿ, ಪ್ರಜಾಪ್ರಭುತ್ವವನ್ನು ಉಳಿಸಿ ಮತ್ತು ನಮ್ಮ ಸಂವಿಧಾನವನ್ನು ರಕ್ಷಿಸಿ ಎಂದು ವಿರೋಧ ಪಕ್ಷಗಳ ನಾಯಕರು ಘೋಷಣೆ ಕೂಗಿದ್ದಾರೆ. ಅಲ್ಲದೆ, ಗೋಲಿ ಮಾರ್ನಾ ಬಂದ್ ಕರೋ, ದೇಶ್ ಕೋ ತೋಡ್ನಾ ಬಂದ್ ಕರೋ (ಗುಂಡು ಹಾರಿಸುವುದನ್ನು ನಿಲ್ಲಿಸಿ, ದೇಶ ಒಡೆಯುವುದನ್ನು ನಿಲ್ಲಿಸಿ) ಎಂದು ಘೋಷಣೆ ಕೂಗಿದ್ದಾರೆ.
ಈ ವೇಳೆ ಮಾತನಾಡಿರುವ ಸ್ಪೀಕರ್ ಓಂ ಬಿರ್ಲಾ ಅವರು, ಯುವಕರ ಕೌಶಲ್ಯಾಭಿವೃದ್ಧಿ ಕುರಿತ ಪ್ರಮುಖ ವಿಚಾರದ ಬಗ್ಗೆ ಚರ್ಚೆ ನಡೆಯುವ ಅಗತ್ಯವಿದ್ದು, ಪ್ರತೀಯೊಬ್ಬರು ತಮ್ಮ ತಮ್ಮ ಸ್ಥಾನಗಳಲ್ಲಿ ಆಸೀನರಾಗಬೇಕೆಂದು ಮನವಿ ಮಾಡಿಕೊಂಡರು. ಅಲ್ಲದೆ, ಪ್ರಶ್ನಾವಳಿ ಅವಧಿ ಸುಸೂತ್ರವಾಗಿ ನಡೆಯುವಂತೆ ಅನುವು ಮಾಡಿಕೊಡುವಂತೆ ಕೇಳಿದರು. ಪ್ರಶ್ನಾವಳಿ ಅವಧಿ ಪೂರ್ಣಗೊಂಡ ಬಳಿಕ ಶೂನ್ಯ ಅವಧಿಯಲ್ಲಿ ಸದಸ್ಯರು ದನಿ ಎತ್ತುವ ವಿಚಾರದ ಬಗ್ಗೆಯೂ ಚರ್ಚೆ ನಡೆಸುವುದಾಗಿ ಇದೇ ವೇಳೆ ಸ್ಪೀಕರ್ ಭರವಸೆ ನೀಡಿದರು. ಆದರೂ ಇದಾವುದ್ಕಕೂ ಜಗ್ಗದ ವಿರೋಧ ಪಕ್ಷಗಳ ನಾಯಕರು ತಮ್ಮ ಸದನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಮುಂದುವರೆಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ