ದುಬೈ: ಆನ್‌ಲೈನ್ ಮೂಲಕ 32 ದಶಲಕ್ಷ ದಿರ್ಹಂ ವಂಚಿಸಿದ ಅಂತರ್‌ರಾಷ್ಟ್ರೀಯ ಗ್ಯಾಂಗ್ ಅನ್ನು ದುಬೈನಲ್ಲಿ ಬಂಧಿಸಲಾಗಿದೆ. ಗ್ಯಾಂಗ್‌ನಲ್ಲಿದ್ದ ಒಂಬತ್ತು ಆಫ್ರಿಕನ್ ಪ್ರಜೆಗಳನ್ನು ಬಂಧಿಸಲಾಗಿದ್ದು, ಅವರು 18 ದೇಶಗಳಲ್ಲಿ ಹರಡಿರುವ 81 ಮೋಸದ ಉದ್ಯಮಗಳಲ್ಲಿ ಭಾಗಿಯಾಗಿದ್ದಾರೆ. ನಾಲ್ಕು ಶತಕೋಟಿ ದಿರ್ಹಂ ವಂಚನೆಗೆ ಸಿದ್ಧತೆ ನಡೆಸುತ್ತಿರುವಾಗ ಈ ಗ್ಯಾಂಗ್ ಸಿಕ್ಕಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಫೋಕ್ಸ್ ಹಂಟ್ ಎಂಬ ಹೆಸರಿನಲ್ಲಿ ದುಬೈ ಪೊಲೀಸರು ಪ್ರಾರಂಭಿಸಿದ ಕಾರ್ಯಾಚರಣೆಯಲ್ಲಿ ಅಂತರ್‌ರಾಷ್ಟ್ರೀಯ ವಂಚನೆ ತಂಡವನ್ನು ಬಂಧಿಸಲಾಗಿದೆ. ವಿವಿಧ ದೇಶಗಳಲ್ಲಿ ಉದ್ಯೋಗದ ಬರವಸೆ ನೀಡುವ ಮೂಲಕ ವಂಚಿಸುತ್ತಿದ್ದ ತಂಡವು,ಆನ್‌ಲೈನ್ ಮೂಲಕ ಹಣ ಪಡೆಯುತ್ತಿದ್ದವು. ಹೂಡಿಕೆದಾರರಿಗೆ ಲಾಭ ನೀಡುವುದಾಗಿ ನಂಬಿಸಿಯೂ ವಂಚನೆ ಮಾಡಿದ್ದಾರೆ ಎಂಬ ಆರೋಪವೂ ಇವರ ಮೇಲಿದೆ.
ಅವರು ಇಮೇಲ್ ಫಿಶಿಂಗ್ ಮೂಲಕ ಮಾಹಿತಿಯನ್ನು ಸೋರಿಕೆ ಮಾಡಿ ಕ್ರೆಡಿಟ್ ಕಾರ್ಡ್‌ಗಳಿಂದ ಹಲವರ ಹಣ ಕಬಳಿಸಿದ್ದರು. 1126 ಕ್ರೆಡಿಟ್‌ಗಳ ಮೂಲಕ 32 ಮಿಲಿಯನ್ ದಿರ್ಹಮ್‌ಗಳನ್ನು ಖಾತೆಗಳೆ ವರ್ಗಾಯಿಸಿದ್ದಾರೆ. ಗೌಪ್ಯ ಮಾಹಿತಿಯ ಪ್ರಕಾರ ವಂಚನೆಗೊಳಗಾದವರ ಪೈಕಿ ಒಬ್ಬರಾಗಿ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ದುಬೈ ಪೊಲೀಸ್ ಮುಖ್ಯಸ್ಥ ಮೇಜರ್ ಜನರಲ್ ಅಬ್ದುಲ್ಲಾ ಖಲೀಫಾ ಅಲ್-ಮರಿ ಹೇಳಿದ್ದಾರೆ.
ಈ ಬಂಧನವು ದುಬೈ ಪೊಲೀಸರ ಇತಿಹಾಸದಲ್ಲಿ ದೊಡ್ಡ ಸಾಧನೆ ಎಂದು ಅವರು ಹೇಳಿದರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ