ಮಂಗಳೂರು :40 ದಿನದ ಪುಟ್ಟ ಕಂದಮ್ಮನ ಹೃದಯ ಶಸ್ತ್ರ ಚಿಕಿತ್ಸೆಗಾಗಿ ಝೀರೊ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಕರೆದೊಯ್ಯಲಾಗಿದ್ದು, 4:30 ಗಂಟೆಯಲ್ಲಿ ಬೆಂಗಳೂರು ತಲುಪಿದೆ.
ಮಂಗಳೂರಿನಿಂದ ಆ್ಯಂಬುಲೆನ್ಸ್ ಮಧ್ಯಾಹ್ನ ಸುಮಾರು 12:05ಕ್ಕೆ ಹೊರಟಿದ್ದು, ಸಂಜೆ 4:35ಕ್ಕೆ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತಲುಪಿದೆ.
ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಮಗುವನ್ನು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆ್ಯಂಬುಲೆನ್ಸ್ ನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಮಂಗಳೂರಿನಿಂದ ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ, ನೆಲಮಂಗಲ ಮಾರ್ಗವಾಗಿ ಬೆಂಗಳೂರು ತಲುಪಿದೆ.
ಉಪ್ಪಿನಂಗಡಿ, ನೆಲ್ಯಾಡಿ, ಗುಂಡ್ಯ ಮೊದಲಾದ ಕಡೆಗಳಲ್ಲಿ ಪೊಲೀಸರು ಹಾಗೂ ಸಾಮಾಜಿಕ ಸಂಘಟನೆಗಳ ಕಾರ್ಯಕರ್ತರು ಆ್ಯಂಬುಲೆನ್ಸ್ ನ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇನ್ನೂ ಇದೇ ವೇಳೆ ಸಾರ್ವಜನಿಕರು ರಸ್ತೆ ಬದಿಯಲ್ಲಿ ನಿಂತು ಮಗುವನ್ನು ಕರೆದೊಯ್ಯುವುದನ್ನು ಅಚ್ಚರಿಯಿಂದ ನೋಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.