ರಿಯಾದ್: ಖಾಸಗಿ ವಲಯದ ಅಡುಗೆ ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ವರ್ಗಾಯಿಸಲು ಸೌದಿ ಅರೇಬಿಯಾದ ಕಾರ್ಮಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವಾಲಯ ಅನುಮೋದನೆ ನೀಡಿದೆ. ನಾಲ್ಕು ಷರತ್ತುಗಳ ಅಡಿಯಲ್ಲಿ ಅಜೀರ್ ಎಂಬ ಆನ್ಲೈನ್ ವ್ಯವಸ್ಥೆಯ ಮೂಲಕ ನೌಕರರನ್ನು ತಾತ್ಕಾಲಿಕವಾಗಿ ವರ್ಗಾಯಿಸಬಹುದು. ಕಾರ್ಮಿಕರನ್ನು ವರ್ಗಾವಣೆ ಮಾಡುವ ಎರಡೂ ಕಂಪನಿಗಳು ಕ್ಯಾಟರಿಂಗ್ ಪರವಾನಗಿಯೊಂದಿಗೆ ಅದೇ ವಲಯದಲ್ಲಿ ಕಾರ್ಯನಿರ್ವಹಿಸುತ್ತಿ ರುವುದಾಗಿರಬೇಕು ಎಂಬುದು ಮೊದಲ ಷರತ್ತು ಆಗಿದೆ.
ನಿತಾಖಾತ್ ಪ್ರಕಾರ, ಹಸಿರು ಗಣದಲ್ಲಿರಬೇಕು, ವರ್ಗಾವಣೆಯ ಅವಧಿ ಎರಡು ವರ್ಷಗಳಲ್ಲಿ 12 ತಿಂಗಳು ಮೀರಬಾರದು ಮತ್ತು ವರ್ಗಾವಣೆಗೊಂಡ ವಿದೇಶಿ ಕಾರ್ಮಿಕರ ಸಂಖ್ಯೆ ಶೇ.20 ಮೀರಬಾರದು. ಹೊಸ ವ್ಯವಸ್ಥೆಯು ಕಾರ್ಮಿಕರನ್ನು ಮತ್ತು ಕೆಲಸದ ಅನುಭವವನ್ನು ಮಾರುಕಟ್ಟೆ ಸ್ನೇಹಿ ರೀತಿಯಲ್ಲಿ ಒಟ್ಟುಗೂಡಿಸುವುದು, ಕಾರ್ಮಿಕ ಕಾನೂನುಗಳನ್ನು ಪಾಲಿಸುವುದು ಮತ್ತು ಪ್ರತಿ ಸಂಸ್ಥೆಗೆ ಅಗತ್ಯವಿರುವ ಕಾರ್ಮಿಕರನ್ನು ಸೌದಿ ಅರೇಬಿಯಾದಲ್ಲಿ ಲಭ್ಯವಿರುವ ಸೌಲಭ್ಯಗಳಿಂದ ನೇಮಿಸಿಕೊಳ್ಳುವ ಉದ್ದೇಶವನ್ನು ಹೊಂದಿದೆ ಎಂದು ಕಾರ್ಮಿಕ ಸಚಿವಾಲಯ ವಿವರಿಸಿದೆ.
ಅಜೀರ್ ವ್ಯವಸ್ಥೆಯ ಮೂಲಕ ನೋಂದಾಯಿತ ಸಂಸ್ಥೆಗಳಿಗೆ ಕಾರ್ಮಿಕರನ್ನು ಆನ್ಲೈನ್ನಲ್ಲಿ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿದೆ ಎಂದು ಸಚಿವಾಲಯ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ