ಮಂಗಳೂರು, ಫೆ.11: ಬುದ್ಧಿವಂತರ ಜಿಲ್ಲೆಯೆಂದು ಬಣ್ಣಿಸಲ್ಪಡುವ ಕರಾವಳಿಯಲ್ಲೂ ಉಗ್ರ, ಕಾಮಪಿಶಾಚಿಗಳು ದೇಶವೇ ಬೆಚ್ಚಿಬೀಳುವಂತಹ ದುಷ್ಕೃತ್ಯಕ್ಕೆ ಮುಂದಾಗಿದ್ದು, ಕೊಣಾಜೆ ಸಮೀಪದ ಮಲಾರ್ ಉಗ್ಗನಬೈಲ್ ಬಳಿ ಮದ್ರಸಕ್ಕೆ ತೆರಳುತ್ತಿದ್ದ ಮೂವರು ವಿದ್ಯಾರ್ಥಿನಿಯರನ್ನು ಅಪಹರಿಸಿ ಅತ್ಯಾಚಾರ ಮತ್ತು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.
ಸೋಮವಾರ ಸಂಜೆ ಸುಮಾರು 5:30ರ ವೇಳೆಗೆ ಮಲಾರ್‌ನ ನೂರುಲ್ ಇಸ್ಲಾಮ್ ಮದ್ರಸಕ್ಕೆ ನಡೆದುಕೊಂಡು ಹೋಗುತ್ತಿದ್ದ ಮೂವರು ಬಾಲಕಿಯರನ್ನು ನಿರ್ಜನ ಪ್ರದೇಶದಲ್ಲಿ ತಡೆದು ನಿಲ್ಲಿಸಿದ ದುಷ್ಕರ್ಮಿಗಳು ಅತ್ಯಾಚಾರ ಮತ್ತು ಕೊಲೆಗೆ ಯತ್ನಿಸಿದರು ಎನ್ನಲಾಗಿದೆ. ಈ ಸಂದರ್ಭ ಅದೇ ದಾರಿಯಾಗಿ ಬರುವ ಇತರರನ್ನು ಕಂಡ ದುಷ್ಕರ್ಮಿಗಳು ಓಡಿ ಪರಾರಿಯಾಗಿದ್ದಾರೆ.
ತಕ್ಷಣ ವಿದ್ಯಾರ್ಥಿಗಳು ಸ್ಥಳೀಯರ ಗಮನಕ್ಕೆ ಈ ವಿಷಯ ತಿಳಿಸಿದ್ದು, ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ. ಅದರಂತೆ ಕಾರ್ಯಾಚರಣೆ ನಡೆಸಿದ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಕೋದಂಡರಾಮ ನೇತೃತ್ವದ ಪೋಲೀಸ್ ತಂಡ ಮಂಗಳವಾರ ಮೂವರು ಆರೋಪಿಗಳನ್ನು ಬಂಧಿಸಿದೆ.
ಬಂಧಿತರನ್ನು ಪಾವೂರು ಉಗ್ಗನಬೈಲು ಸಮೀಪದ ಗುಣಪಾಲ (25), ಕಿರಣ್ ಕುಮಾರ್ (26), ನೀರುಮಾರ್ಗದ ಸುಭಾಷ್ (29) ಎಂದು ಗುರುತಿಸಲಾಗಿದೆ.
ಆರೋಪಿಗಳ ವಿರುದ್ಧ ಫೋಕ್ಸೋ, ಅತ್ಯಾಚಾರಕ್ಕೆ ಯತ್ನ ಹಾಗೂ ಕೊಲೆಯತ್ನ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್