ದುಬೈ: ಯುಎಇಯಲ್ಲಿ ಕೊರೋನಾ ವೈರಸ್ ಲಕ್ಷಣ ಕಂಡುಬಂದ ರೋಗಿಗಳ ರೋಗ ನಿರ್ಣಯವನ್ನು 24 ಗಂಟೆಯೊಳಗೆ ಪತ್ತೆ ಹಚ್ಚುವ ವ್ಯವಸ್ಥೆ ಮಾಡಲಾಗಿದೆ. ಕೊರೋನಾ ಶಂಕಿತರನ್ನು ಸುರಕ್ಷಿತವಾಗಿ ನಿಭಾಯಿಸುವ ಕಾರ್ಯವಿಧಾನಗಳನ್ನು ಸಚಿವಾಲಯವು ಅಂತಿಮಗೊಳಿಸಿದೆ.
ಈ ಮೊದಲು, ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ, ಕೊರೋನ ವೈರಸ್ ಪತ್ತೆಗಾಗಿ ಕೇವಲ ಒಂದು ವೈರಾಲಜಿ ಲ್ಯಾಬ್ ಮಾತ್ರ ಕಾರ್ಯಾಚರಿಸುತ್ತಿತ್ತು. ಇದೀಗ ಹೆಚ್ಚಿನ ವೈರಾಲಜಿ ಲ್ಯಾಬ್‌ಗಳನ್ನು ಪರೀಕ್ಷಿಸುವ ಪ್ರಕ್ರಿಯೆಯಲ್ಲಿದೆ ಎಂದು ಆರೋಗ್ಯ ಇಲಾಖೆ ಪ್ರಕಟಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯ ಅನುಸಾರವಾಗಿ ಅವು ಕಾರ್ಯಾಚರಿಸಲಿದೆ.
ಕೊರೋನಾದ ಮಾಹಿತಿಯನ್ನು ದೃಢೀಕರಿಸಲು ಮತ್ತು ವಿನಿಮಯ ಮಾಡಿಕೊಳ್ಳುವ ಏಕೈಕ ಅಧಿಕೃತ ಕೇಂದ್ರವನ್ನು ಏರ್ಪಾಟು ಮಾಡಲಾಗಿದೆ. ಇದು ವದಂತಿಗಳನ್ನು ತಪ್ಪಿಸಲು ಮತ್ತು ಊಹಾಪೋಹಗಳನ್ನು ತಡೆಯಲು ಸಹಾಯ ಮಾಡಲಿದೆ. ಕೊರೋನಾ ಶಂಕಿತರ ತನಿಖೆ ಮತ್ತು ರೋಗ ನಿರ್ಣಯಕ್ಕಾಗಿ ವಿಶೇಷ ಆಸ್ಪತ್ರೆಗಳನ್ನು ನಿಯೋಜಿಸಲಾಗಿದೆ. ಕೊರೋನಾ ರೋಗ ಲಕ್ಷಣಗಳೊಂದಿಗೆ ರೋಗಿಯು ಯಾವುದೇ ಆರೋಗ್ಯ ಕೇಂದ್ರಕ್ಕೆ ಬಂದರೂ, 24 ಗಂಟೆಗಳ ಒಳಗೆ ಸೋಂಕಿಗೆ ಒಳಗಾಗಿದ್ದಾರೆಯೇ ಎಂದು ನಿರ್ಧರಿಸಲು ಸಾಧ್ಯವಾಗಲಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು