ಬೆಂಗಳೂರು,ಫೆ.15: ಮಂಗಳೂರು ಗೋಲಿಬಾರ್ ಪ್ರಕರಣದ ಬಗ್ಗೆ ಮ್ಯಾಜಿಸ್ಟಿರಿಯಲ್ ವಿಚಾರಣೆ ನಡೆಸಲು ಉಡುಪಿ ಜಿಲ್ಲಾ ದಂಡಾಧಿಕಾರಿಯನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಳೆದ ವರ್ಷ ಡಿಸೆಂಬರ್ 19ನೇ ತಾರೀಕಿನಂದು ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಬಗ್ಗೆ ಯಾರ ಬಳಿಯಾದರೂ ವಿಡಿಯೋ ತುಣುಕು ಮತ್ತು ಸಮರ್ಪಕ ಸಾಕ್ಷಾಧಾರಗಳಿದ್ದರೆ ಸಲ್ಲಿಸಬಹುದು. ಫೆಬ್ರವರಿ 19ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೂ ಮಂಗಳೂರು ಸಹಾಯಕ ಆಯುಕ್ತರ ಕೋರ್ಟ್ ಹಾಲ್ನಲ್ಲಿ ನಡೆಯಲಿರುವ ವಿಚಾರಣೆಯ ಸಂದರ್ಭದಲ್ಲಿ ಹಾಜರುಪಡಿಸಬಹುದು ಎಂದು ರಾಜ್ಯ ಸರ್ಕಾರ ಪ್ರಕಟನೆ ಹೊರಡಿಸಿದೆ.
ಮಂಗಳೂರು ಗೋಲಿಬಾರ್ನಲ್ಲಿ ಇಬ್ಬರು ಅಮಾಯಕರು ಮೃತಪಟ್ಟಿದ್ಧಾರೆ. ಪ್ರತಿಭಟನಾಕಾರರ ಮೇಲಿನ ಪೊಲೀಸರ ದೌರ್ಜನ್ಯದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೋರಿ ಹೈಕೋರ್ಟ್ಗೆ ಜೆಡಿಎಸ್ ಮುಖಂಡ ಮುಹಮ್ಮದ್ ಇಕ್ಬಾಲ್ ಮತ್ತು ಉಮರ್ ಎಂಬುವರು ಅರ್ಜಿ ಸಲ್ಲಿಸಿದರು. ಈ ಪ್ರಕರಣ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಪೊಲೀಸರ ಗೋಲಿಬಾರ್ ಕುರಿತಂತೆ ಸೂಕ್ತ ದಾಖಲೆಗಳನ್ನು ನೀಡುವಂತೆ ಆದೇಶಿಸಿದೆ.
ಕಳೆದ ಡಿಸೆಂಬರ್ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದಂತೆಯೇ ರಾಜ್ಯದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆಯ ಕಾವು ಹೆಚ್ಚುತ್ತಿದ್ದಂತೆ ಕರ್ಫ್ಯೂ ಜಾರಿ ಮಾಡಲಾಗಿತ್ತು. ಈ ವೇಳೆ ಮಂಗಳೂರಿನಲ್ಲಿ ಪೊಲೀಸರ ಗುಂಡೇಟಿಗೆ ಇಬ್ಬರು ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಈ ಬೆನ್ನಲ್ಲೇ ಮಂಗಳೂರಿನಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದ ಜಲೀಲ್ ಮತ್ತು ನೌಶಾದ್ ವಿರುದ್ಧವೇ ಎಫ್ಐಆರ್ ದಾಖಲಿಸುವ ಮೂಲಕ ಪೊಲೀಸರು ವಿವಾದಕ್ಕೆ ಕಾರಣರಾಗಿದ್ದರು. ಡಿ. 19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ತಮ್ಮ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ಮಂಗಳೂರಿನ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ, ಪೊಲೀಸರನ್ನು ಕೊಲ್ಲು ಸಂಚು ರೂಪಿಸಿದ್ದ ಗುಂಪಿನ ಮೇಲೆ ಗುಂಡು ಹಾರಿಸಿದಾಗ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಎಫ್ಐಆರ್ನಲ್ಲಿ ದಾಖಲಿಸಲಾಗಿತ್ತು.
ಈ ಘಟನೆಗೆ ಸಂಬಂಧಿಸಿದಂತೆ ಮೃತ ಅಬ್ದುಲ್ ಜಲೀಲ್ ಮತ್ತು ನೌಶಾದ್ ಸೇರಿದಂತೆ 29 ಜನರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಪೊಲೀಸ್ ಗುಂಡಿನ ದಾಳಿಗೆ ಬಲಿಯಾದ ಜಲೀಲ್ನನ್ನು 3ನೇ ಆರೋಪಿಯೆಂದು ಹಾಗೂ ನೌಶಾದ್ನನ್ನು 8ನೇ ಆರೋಪಿಯೆಂದು ನಮೂದಿಸಲಾಗಿದೆ. ಮೃತ ವ್ಯಕ್ತಿಗಳ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು, ಅವರ ಸಾವಿಗೆ ನ್ಯಾಯ ದೊರಕಿಸಬೇಕೆಂಬ ಆಗ್ರಹ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೃತರ ವಿರುದ್ಧವೇ ಎಫ್ಐಆರ್ ದಾಖಲಿಸಿರುವುದು ಇನ್ನಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಈ ಮಧ್ಯೆಯೇ ಪೊಲೀಸರ ದೌರ್ಜನ್ಯದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕೋರಿ ಜೆಡಿಎಸ್ ಮುಖಂಡ ಮುಹಮ್ಮದ್ ಇಕ್ಬಾಲ್ ಹೈಕೋರ್ಟ್ ಮೆಟ್ಟಿಲೇರಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ