ಶಾರ್ಜಾ: ಶಾರ್ಜಾ ಆಡಳಿತಾಧಿಕಾರಿ ಶೈಖ್ ಸುಲ್ತಾನ್ ಬಿನ್ ಮುಹಮ್ಮದ್ ಅಲ್ ಖಾಸಿಮಿಯವರ ಅಧೀನದಲ್ಲಿ ನಡೆಸಲಾಗುವ ಇಸ್ಲಾಮಿಕ್ ಉಲಮಾ ಅಧ್ಯಯನ ಕಾನ್ಪೆರೆನ್ಸ್ಗೆ ನೇತೃತ್ವ ನೀಡಲು ಭಾರತದ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಶೈಖುನಾ ಎ.ಪಿ ಉಸ್ತಾದರನ್ನು ಆಮಂತ್ರಿಸಲಾಗಿದೆ.
ಶಾರ್ಜಾದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಅಲ್ಲಿನ ಇಮಾಮರುಗಳು, ಮುಫ್ತಿಗಳು ಖತೀಬ್ಗಳು, ಉನ್ನತ ಸರಕಾರಿ ಉದ್ಯೋಗಸ್ಥರು ಭಾಗವಹಿಸಲಿದ್ದಾರೆ.

ಫೆಬ್ರವರಿ 17, 18, 19 ಈ ಮೂರು ದಿನಗಳಲ್ಲಿ “ಸಿಹಾ ಹುಸಿತ್ತ” ಹದೀಸ್ ಗ್ರಂಥಗಳ ಅಧ್ಯಯನ ತರಗತಿ ನಡೆಯಲಿದ್ದು , ಫೆಬ್ರವರಿ 18 ರಂದು ಶೈಖುನಾ ಎ.ಪಿ ಉಸ್ತಾದರು ಸುನನು ನಸಾಯೀ, ಸುನನು ತಿರ್ಮುದ್ಸೀ ಬಗ್ಗೆ ತರಗತಿ ನಡೆಸಲಿದ್ದಾರೆ.
ನಿರಂತರ ಆರು ದಶಕಗಳ ಕಾಲ ಸಾವಿರಾರು ವಿದ್ಯಾರ್ಥಿಗಳಿಗೆ ಬುಖಾರಿ ಕ್ಲಾಸ್ ನಡೆಸುತ್ತಿರುವ ಶೈಖುನಾ ಎ.ಪಿ ಉಸ್ತಾದರ ಸಾಧನೆ ಮನಗಂಡು ದುಬೈ ಸರಕಾರ ಅವರಿಗೆ ಈ ಮಹತ್ವದ ವೇದಿಕೆ ನೀಡಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ