ಮಧುಗಿರಿಯ ಅತುಲ್ ಕುಮಾರ್ ಎಂಬಾತ ಮಧಿಗಿರಿ ಮೋದಿ ಎಂಬ ಹೆಸರಿನಲ್ಲಿ ಮುಸ್ಲಿಮ್ ಧರ್ಮದ ಪ್ರವಾದಿ ಮುಹಮ್ಮದ್ ಪೈಗಂಬರ್(ಸ.ಅ) ರ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕೊಪ್ಪ ಡಿವಿಷನ್ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್(ಎಸ್ಸೆಸ್ಸೆಫ್) ನಾಯಕರು ಕೊಪ್ಪ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ರವಿ ಅವರನ್ನು ಅವರ ಕಛೇರಿಯಲ್ಲಿ ಭೇಟಿಯಾಗಿ ದೂರು ದಾಖಲಿಸುವಂತೆ ಮನವಿ ಸಲ್ಲಿಸಿ,ಜಾಗತಿಕ ಮುಸ್ಲಿಮರನ್ನು ಕೆರಳಿಸುವ ಕೆಲಸ ಮಾಡಿರುವ ಇವನನ್ನು ಶಾಶ್ವತವಾಗಿ ಬಂಧಿಸಬೇಕೆಂದು ಆಗ್ರಹಿಸಿತು.
ದೂರು ಸ್ವೀಕರಿಸಿದ ಕೊಪ್ಪ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ರವಿಯವರು ಸೂಕ್ತ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಎಸ್ಸೆಸ್ಸೆಫ್ ಚಿಕ್ಕಮಗಳೂರು ಜಿಲ್ಲಾ ಉಪಾಧ್ಯಕ್ಷರಾದ ಆಬಿದ್ ಸಖಾಫಿ ಮಾಗುಂಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರ್ಫುದ್ದೀನ್ ಕುದುರೆಗುಂಡಿ, ಜಿಲ್ಲಾ ನಾಯಕರುಗಳಾದ ಸಲೀಮ್ ಕುದುರೆಗುಂಡಿ, ಶಮೀಮ್ ಕುದುರೆಗುಂಡಿ ಹಾಗೂ ಕೊಪ್ಪ ಡಿವಿಷನ್ ಅಧ್ಯಕ್ಷರಾದ ಸಾದಿಕ್ ಶೃಂಗೇರಿ ಪ್ರಧಾನ ಕಾರ್ಯದರ್ಶಿ ಶರೀಫ್ ಕುದುರೆಗುಂಡಿ, ಡಿವಿಷನ್ ನಾಯಕರಾದ ಸಲೀಮ್, ನಿಝಾಮುಧ್ಧೀನ್, ಶಂಶುಧ್ಧೀನ್,ಸಾದಾತ್ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ