ರಿಯಾದ್: ಸೌದಿ ಅರೇಬಿಯಾದಲ್ಲಿ, ಅಪರಾಧಿಗಳನ್ನು ಪತ್ತೆಹಚ್ಚಲು ಪೊಲೀಸರು ವಿಶೇಷ ವಾಹನವನ್ನು ಹೊರತಂದಿದ್ದಾರೆ. ಸುರಕ್ಷತಾ ವಿಭಾಗದ ಕಾರ್ಯಾಚರಣೆಗಾಗಿ ಉನ್ನತ ತಾಂತ್ರಿಕತೆಯ ಹಿನ್ನೆಲೆಯಲ್ಲಿ ಕಾರ್ಯಾಚರಿಸುವ ವಾಹನಗಳನ್ನು ಬಿಡುಗಡೆ ಮಾಡಲಾಗಿದೆ.
ಈ ಹಿಂದೆ ಸೌದಿ ಗಡಿ ಭಾಗದಲ್ಲಿ ಮದ್ಯ ಮತ್ತು ಮಾದಕವಸ್ತು ಕಳ್ಳಸಾಗಣೆ ವಾಹನಗಳನ್ನು ಪತ್ತೆ ಹಚ್ಚಲು ವಿಶೇಷ ಉಪಕರಣಗಳನ್ನು ಅಳವಡಿಸಲಾಗಿತ್ತು. ಇದೇ ರೀತಿಯ ತಂತ್ರಜ್ಞಾನವನ್ನು ಬಳಸಿಕೊಂಡು ಹೊಸ ಭದ್ರತಾ ವಾಹನಗಳು ಕಾರ್ಯಾಚರಿಸಲಿದೆ. ಇದು ಸೌದಿಯಲ್ಲಿ ವಿವಿಧ ಕ್ರಿಮಿನಲ್ ಪ್ರಕರಣಗಳನ್ನು ಪತ್ತೆ ಹಚ್ಚಲು ಮತ್ತು ವಿಚಾರಣೆ ನಡೆಸಲು ಅನುವು ಮಾಡಿಕೊಡಲಿದೆ ಎಂದು ಪೊಲೀಸರು ಹೇಳುತ್ತಾರೆ.
ಈ ವಾಹನಗಳು ಆನ್‌ಲೈನ್ ಸಂಪರ್ಕ ಯಂತ್ರಗಳನ್ನು ಹೊಂದಿದ್ದು, ಆ ಮೂಲಕ ರಾಷ್ಟ್ರೀಯ ಮಾಹಿತಿ ಕೇಂದ್ರವನ್ನು ಸಂಪರ್ಕಿಸಲಾಗಿದೆ. ವಿಮಾನ ನಿಲ್ದಾಣಗಳ ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ ಈಗಾಗಲೇ ಬೆರಳಚ್ಚು ಮತ್ತು ಕಣ್ಣಿನ ದಾಖಲೆಗಳನ್ನು ಸಂಗ್ರಹಿಸಲಾಗುತ್ತದೆ.
ಪರಿಣಾಮವಾಗಿ, ಪೊಲೀಸರಿಗೆ ಯಂತ್ರದ ಮೂಲಕ ವಾಹನದ ವಿವರಗಳನ್ನು ಯಥಾ ಸಮಯದಲ್ಲಿ ಟ್ರ್ಯಾಕ್ ಮಾಡಲು ಸಾಧ್ಯವಾಗಲಿದೆ.ರಾಷ್ಟ್ರೀಯ ಭದ್ರತೆಯ ಭಾಗವಾಗಿ ಹೊಸ ವಾಹನಗಳನ್ನು ಬಿಡುಗಡೆ ಮಾಡಲಾಗಿದೆ. ಇದರೊಂದಿಗೆ, ಅಕ್ರಮ ಚಟುವಟಿಕೆಗಳಲ್ಲಿ ಸಿಕ್ಕಿಬಿದ್ದವರನ್ನು ಕೂಡಲೇ ವಶಪಡಿಸಿಕೊಳ್ಳುವುದು ಸಾಧ್ಯವಾಗಲಿದೆ ಎಂದು ಭದ್ರತಾ ಪಡೆಗಳ ನಿರೀಕ್ಷೆಯಾಗಿದೆ.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ