ಬೆಳ್ತಂಗಡಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿರುವವರ ಮತ್ತು ಅಮಾಯಕರ ಮೇಲೆ ಕ್ರೂರ ಹಿಂಸಾಚಾರ ನಡೆಸಿ, ಅಮಾಯಕರ ಕೊಲೆ, ಸಾರ್ವಜನಿಕ ಆಸ್ತಿಗೆ ಹಾನಿ, ಪವಿತ್ರ ಮಸೀದಿ, ಮನೆಗಳಿಗೆ ಹಾನಿ, ಮೊದಲಾದ ಅಮಾನವೀಯ ಕೃತ್ಯಗಳನ್ನು ನಡೆಸಿ ರಾಷ್ಟ್ರ ರಾಜಧಾನಿಯನ್ನು ರಕ್ತಸಿಕ್ತಗೊಳಿಸಿದ ಕೋಮುವಾದಿ ಫ್ಯಾಸಿಸ್ಟ್ ಶಕ್ತಿಯ ನಡೆಯು ಅತ್ಯಂತ ಖಂಡನೀಯ.
ಈ ಘಟನೆಗಳಿಗೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡದೆ, ಮೌನ ವಹಿಸಿ ಬಹಿರಂಗ ಬೆಂಬಲ ನೀಡುತ್ತಿರುವ ಫ್ಯಾಸಿಸ್ಟ್ ಸರಕಾರಗಳ ಧಮನೀಯ ಆಡಳಿತ ಕ್ರಮವು ಸಂವಿಧಾನದ ಅಳಿವಿಗೆ ಕಾರಣವಾಗಲಿದೆ. ಇದು ಗಾಂಧೀಜಿಯ ಅಭಯ ಭಾರತದಲ್ಲಿ ಅತ್ಯಂತ ಖೇದಕರವಾದ ಘಟನೆ ಎಂದು SSF ಗುರುವಾಯನಕೆರೆ ಸೆಕ್ಟರ್ ಸಮಿತಿ ಅಭಿಪ್ರಾಯಪಟ್ಟಿದೆ.
ಸೆಕ್ಟರ್ ವ್ಯಾಪ್ತಿಯ ಎಲ್ಲಾ ಕಾರ್ಯಕರ್ತರು ದಿಲ್ಲಿಯ ಹಿಂಸಾಚಾರ ಕೃತ್ಯವನ್ನು, ಗಲಭೆಕೋರರಿಗೆ ಸಾಥ್ ನೀಡುತ್ತಿರುವ ಆಡಳಿತ ವ್ಯವಸ್ಥೆಯನ್ನು ತಮಗೆ ಸಾಧ್ಯವಾದ ರೂಪದಲ್ಲಿ, ಶಾಂತಿಯುತರಾಗಿ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕವೂ ಖಂಡಿಸಬೇಕು ಮತ್ತು ಸರ್ವಶಕ್ತನಲ್ಲಿ ಗಲಭೆಪೀಡಿತ ಪ್ರದೇಶದ ಅಲ್ಪಸಂಖ್ಯಾತರ ಸಂರಕ್ಷಣೆಗಾಗಿ ಪ್ರತ್ಯೇಕ ಪ್ರಾರ್ಥನೆ ನಡೆಸಬೇಕೆಂದು ಕರೆ ಕೊಟ್ಟಿದೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ