ಮನಾಮ: ಕರೋನ ವೈರಸ್ ವಿರುದ್ಧದ ಜಾಗೃತಿಯಲ್ಲಿ ಸಾರ್ವಜನಿಕರ ಸಹಾಯ ಮತ್ತು ಬೆಂಬಲ ಬೇಕು ಎಂದು ಕ್ರೌನ್ ಪ್ರಿನ್ಸ್ ಸೆಂಟರ್ ಫಾರ್ ಟ್ರೈನಿಂಗ್ ಆ್ಯಂಡ್ ಮೆಡಿಕಲ್ ರಿಸರ್ಚ್‌ನ ರಾಷ್ಟ್ರೀಯ ಮಿಷನ್ ತಂಡದ ಸದಸ್ಯ ಮತ್ತು ಬಿಡಿಎಫ್ ಆಸ್ಪತ್ರೆಯ ಸಾಂಕ್ರಾಮಿಕ ರೋಗ ಸಲಹೆಗಾರ ಲೆಫ್ಟಿನೆಂಟ್ ಕರ್ನಲ್ ಡಾ.ಮನಾಫ್ ಅಲ್-ಕಹ್ತಾನಿ ಹೇಳಿದ್ದಾರೆ.
ಅವರು ಬಹ್ರೈನ್‌ನ ಆಂತರಿಕ ಮತ್ತು ಆರೋಗ್ಯ ಸಚಿವಾಲಯಗಳು ಜಂಟಿಯಾಗಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೋಗ ತಡೆಗಟ್ಟುವ ಕ್ರಮಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡುತ್ತಿದ್ದರು.
ರೋಗ ತಡೆಗಟ್ಟುವಿಕೆಗಾಗಿ ಸರಕಾರಿ ಸಚಿವಾಲಯಗಳು ನೀಡುವ ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು. ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ರೋಗಿಗಳ ಆರೋಗ್ಯ ಸ್ಥಿತಿ ತೃಪ್ತಿಕರವಾಗಿದೆ ಎಂದು ಸಲ್ಮಾನಿಯಾ ವೈದ್ಯಕೀಯ ಸಂಕೀರ್ಣದ ಸಲಹೆಗಾರ್ತಿ ಡಾ. ಜಮೀಲಾ ಹೇಳಿದರು.
ರೋಗವನ್ನು ಪರಿಣಾಮಕಾರಿ ಯಾಗಿ ಎದುರಿಸಲು ಸಾರ್ವಜನಿಕರೆಲ್ಲರ ಸಹಕಾರ ಅಗತ್ಯವಿದೆ. ಫೆಬ್ರವರಿಯಲ್ಲಿ ಇರಾನ್‌ಗೆ ಭೇಟಿ ನೀಡಿದ ಎಲ್ಲ ಜನರು ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯಕೀಯ ಚಿಕಿತ್ಸೆಗೆ ಒಳಗಾಗಬೇಕು. ಅವರು 444 ಸಂಖ್ಯೆಯ ಮೂಲಕ ಕರೆ ಮಾಡಿ ವೈದ್ಯಕೀಯ ಪರೀಕ್ಷೆಯನ್ನು ಕಾಯ್ದಿರಿಸಬಹುದು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು