ಕೊಝಿಕ್ಕೋಡ್: ಪೌರತ್ವ ವಿರೋಧಿ ಹೋರಾಟದಲ್ಲಿ ಇಸ್ಲಾಮಿಕ್ ಘೋಷಣೆಗಳನ್ನು ಕೂಗುವುದು ಸರಿಯಲ್ಲ ಎಂದು ಅಖಿಲ ಭಾರತ ಸುನ್ನಿ ಜಮಿಯತುಲ್ ಉಲಮಾದ ಪ್ರಧಾನ ಕಾರ್ಯದರ್ಶಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಹೇಳಿದ್ದಾರೆ. ಪ್ರಸ್ತುತ ಚಳುವಳಿಯು ಭಾರತದ ಜಾತ್ಯತೀತತೆ ಮತ್ತು ಅದರ ಸಂವಿಧಾನವನ್ನು ರಕ್ಷಿಸುವ ಹೋರಾಟವಾಗಿದೆ. ಅಲ್ಲಿ ಇಸ್ಲಾಮಿಕ್ ಘೋಷಣೆಗಳಿಗೆ ಯಾವುದೇ ಪ್ರಸಕ್ತಿಯಿಲ್ಲ. ಹಾಗೆ ಮಾಡುವುದರಿಂದ ವಿಭಜನೆ ಉಂಟಾಗುತ್ತದೆ. ಧಾರ್ಮಿಕ ವಿಷಯವನ್ನು ಕೂಡ ಈ ಹೋರಾಟದಲ್ಲಿ ತರಬಾರದು ಎಂದು ಕಾಂತಪುರಂ ಹೇಳಿದರು.
ನಾಗರಿಕ ಹೋರಾಟಕ್ಕೆ ಸಂಬಂಧಿಸಿದಂತೆ ಜಾತ್ಯತೀತ ಪಕ್ಷಗಳು ಆಯೋಜಿಸಿದ್ದ ಸರಣಿ ಆಂದೋಲನಗಳಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಹೇಳಿದ ಕಾಂತಪುರಂ, ಇಂತಹ ಕಾರ್ಯಕ್ರಮಗಳ ಮೂಲಕ “ಭಾರತ ಒಂದು, ಭಾರತ ನಮ್ಮದು, ಇಲ್ಲಿ ಸೌಹಾರ್ದ, ಶಾಂತಿ ನೆಲಸಬೇಕು” ಮುಂತಾದ ಘೋಷಣೆಗಳು ಮೊಳಗಬೇಕು ಎಂದು ಕೋಝಿಕೋಡ್‌ನಲ್ಲಿ ಮಾಧ್ಯಮಗಳಿಗೆ ತಿಳಿಸಿದರು.
ಜನಸಾಮಾನ್ಯರಲ್ಲಿ ದ್ವೇಷ ಮತ್ತು ವೈರತ್ವವನ್ನು ಹರಡುವ ಮೂಲಕ ಮುಸ್ಲಿಂ ಸಮುದಾಯವನ್ನು ದೇಶದ್ರೋಹಿಗಳಾಗಿ ಪ್ರತ್ಯೇಕಿಸುವ ಫ್ಯಾಸಿಸ್ಟ್ ಪ್ರಯತ್ನಗಳು ವ್ಯಾಪಕವಾಗಿ ನಡೆಯುತ್ತಿವೆ. ಇದು ದೇಶದ ಜಾತ್ಯತೀತ ಮುಖವನ್ನು ವಿರೂಪಗೊಳಿಸುತ್ತದೆ. ದೆಹಲಿಯಲ್ಲಿ ಸರಕಾರ ಮತ್ತು ಪೊಲೀಸರು ಮುಗ್ಧ ಜನರನ್ನು ಕ್ರೂರವಾಗಿ ಬೇಟೆಯಾಡಿದಾಗ, ಗಲಭೆಗೆ ಕಾರಣರಾದವರ ಮೇಲೆ ಕಾನೂನು ಕ್ರಮ ಜರುಗಿಸದಿರುವುದು ಆಘಾತಕಾರಿಯಾಗಿದೆ ಎಂದು ಕಾಂತಪುರಂ ಹೇಳಿದರು.
ದೆಹಲಿ ಗಲಭೆಗೆ ಒಳಗಾದವರಿಗೆ ಕೇರಳ ಮುಸ್ಲಿಂ ಜಮಾಅತ್ ವತಿಯಿಂದ ಎಲ್ಲಾ ರೀತಿಯ ಸಹಾಯವನ್ನು ನೀಡಲಾಗುತ್ತಿದೆ ಎಂದು ಕಾಂತಪುರಂ ಹೇಳಿದರು.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ